ಉಜಿರೆ : ಭಾರತೀಯ ಜನತಾ ಪಾರ್ಟಿ ಉಜಿರೆ ಮಹಾಶಕ್ತಿ ಕೇಂದ್ರ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ 75ನೇ ವರ್ಷದ ಜನ್ಮದಿನದ ಪ್ರಯುಕ್ತ ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದಲ್ಲಿ ಸೆ.17 ರಂದು ವಿಶೇಷ ಪೂಜೆ ಸಲ್ಲಿಸಲಾಯಿತು.
ಬಳಿಕ ಪ್ರಾರ್ಥಿನೆ ಸಲ್ಲಿಸಿ, ಸಿಹಿತಿಂಡಿ ಹಂಚಲಾಯಿತು.

ಈ ಸಂದರ್ಭ ದೇವಸ್ಥಾನದ ಅನುವಂಶೀಯ ಆಡಳಿತ ಮೋಕ್ತೆಸರರಾದ ಶರತ್ ಕೃಷ್ಣ ಪಡ್ವೆಟ್ನಾಯರು, ಉಜಿರೆ ಪಂಚಾಯತ್ ಉಪಾಧ್ಯಕ್ಷರಾದ ರವಿ ಪೂಜಾರಿ ಬರಮೇಲು, ಉಜಿರೆ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ನಿರಂಜನ್ ಶೆಟ್ಟಿ, ಮಹಿಳಾ ಮೋರ್ಚಾ ಮಂಡಲ ಪ್ರಧಾನಕಾರ್ಯದರ್ಶಿ ಪೂರ್ಣಿಮಾ ಜಯಂತ್, ಕಾರ್ಯದರ್ಶಿ ಶಶಿಕಲಾ ದೇವಪ್ಪ ಗೌಡ, ಮಾಜಿ ಪಂಚಾಯತ್ ಅಧ್ಯಕ್ಷರಾದ ಪುಷ್ಪವತಿ. ಆರ್ ಶೆಟ್ಟಿ, ಪ್ರಮುಖರಾದ ಅರವಿಂದ ಕಾರಂತ್, ರಾಘವೇಂದ್ರ ಉಂಕ್ರೋಟ್ಟು ಹಾಗೂ ಪಕ್ಷದ ಅನ್ಯನ್ಯ ಜವಾಬ್ದಾರಿ ಪದಾಧಿಕಾರಿಗಳು, ಜನಪ್ರತಿನಿದಿನಗಳು, ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.




