ತಾಯಿಯನ್ನು ಚಿಕಿತ್ಸೆಗೆ ದಾಖಲಿಸಿ ಅದೇ ಆಸ್ಪತ್ರೆಯ ಆವರಣದಲ್ಲೇ ಆತ್ಮಹತ್ಯೆಗೆ ಶರಣಾದ ಮಗ

ಶಿವಮೊಗ್ಗ: ತಾಯಿಯನ್ನು ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಿಸಿ ಅದೇ ಆಸ್ಪತ್ರೆಯ ಆವರಣದಲ್ಲಿ ಮಗ ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದ ಯುವಕನನ್ನು ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕು ಸುರಹೊನ್ನೆಯ ಆಕಾಶ್(30) ಎಂದು ಗುರುತಿಸಲಾಗಿದೆ.

ಮೃತ ಆಕಾಶ್ ತನ್ನ ತಾಯಿಯನ್ನು ಚಿಕಿತ್ಸೆಗೆಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಿದ್ದು, ಬಳಿಕ ಆಸ್ಪತ್ರೆಯ ಆವರಣದಲ್ಲಿರುವ ಮಾರ್ಗಸೂಚಿ ಬೋರ್ಡಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಈ ಬಗ್ಗೆ ದೊಡ್ಡ ಪೇಟೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

Leave a Reply

Your email address will not be published. Required fields are marked *