ಅಂಗಡಿಗಳಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ-ರೋಸಿ ಹೋದ ಗ್ರಾಮಸ್ಥರಿಂದ ಗ್ರಾಮದೇವತೆಯಾದ ಚಾಮುಂಡೇಶ್ವರಿ ದೇವಿಗೆ ಪ್ರಾರ್ಥನೆ

ಚಿಕ್ಕಮಗಳೂರು: ಗ್ರಾಮದ ಅಂಗಡಿಗಳಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ ಮಾಡಲಾಗುತ್ತಿದ್ದು ಯುವಕರು ಕುಡಿತದ ಚಟಕ್ಕೆ ದಾಸರಾಗುತ್ತಿದ್ದಾರೆ ಇದರಿಂದ ಬೇಸರಗೊಂಡ ಗ್ರಾಮಸ್ಥರು ಗ್ರಾಮದೇವತೆಯಾದ ಚಾಮುಂಡೇಶ್ವರಿಯ ಮೊರೆ ಹೋದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹೊಸಕೆರೆ ಗ್ರಾಮದಲ್ಲಿ ನಡೆದಿದೆ.

ಇಲ್ಲಿನ ಕೆಲವು ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಇದರಿಂದ ಗ್ರಾಮದ ಜನರು ಕೆಲಸ ಕಾರ್ಯಗಳನ್ನು ಬಿಟ್ಟು ಕುಡಿತಕ್ಕೆ ದಾಸನಾಗುತ್ತಿದ್ದಾರೆ. ಈ ಕುರಿತು ಪೊಲೀಸರಿಗೆ ಹಲವು ಭಾರಿ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ.

ಅಂಗಡಿಯವರು ಮದ್ಯ ಮಾರಾಟ ಮಾಡುವುದನ್ನು ನಿಲ್ಲಿಸುವಂತೆ ಜೊತೆಗೆ ನಮ್ಮ ಗ್ರಾಮದ ಜನರು ಎಣ್ಣೆ ಖರೀದಿಸದಂತೆ ಮಾಡಬೇಕು, ಖಾಕಿಯಿಂದ ಆಗದ ಕೆಲಸ-ನೀನೆ ಮಾಡು, ಜೊತೆಗೆ ಅಕ್ರಮ ಮದ್ಯ ಮಾರಾಟ ಮಾಡಿ ಯುವಜನತೆಯನ್ನು ಹಾಳು ಮಾಡುವವರಿಗೆ ನೀನೇ ಶಿಕ್ಷೆ ಕೊಡಬೇಕು ಎಂದು ಗ್ರಾಮದಲ್ಲಿರುವ ಚಾಮುಂಡೇಶ್ವರಿ ದೇಗುಲಕ್ಕೆ ಬಂದಿದ್ದ ಗ್ರಾಮಸ್ಥರು ದೇವಿಯಲ್ಲಿ ಪ್ರಾರ್ಥನೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *