ವಿಟ್ಲ: ಪ್ರಕರಣವೊಂದರಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಕೇರಳ ರಾಜ್ಯದ ಕ್ಯಾಲಿಕಟ್ ನಿವಾಸಿ ಅಹ್ಮದ್ ಗಜನಿ (39 ) ಎಂದು ಗುರುತಿಸಲಾಗಿದೆ.

ಈತನ ಮೇಲೆ ಪ್ರಕರಣ ದಾಖಲಾಗಿದ್ದು, 7 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿ ಕೊಂಡಿದ್ದು. ನ್ಯಾಯಾಲಯದಿಂದ ವಾರಂಟ್ ಹೊರಡಿಸಲಾಗಿತ್ತು.
ಕೇರಳ ಕ್ಯಾಲಿಕಟ್ ನ ರಿಕ್ಷಾ ನಿಲ್ದಾಣದಲ್ಲಿ ಗಜನಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.




