ಸಜಿಪ: ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಾಮೂಹಿಕ ಆಶ್ಲೇಷ ಬಲಿ ಪೂಜೆ ಹಾಗೂ ಆಶ್ಲೇಷ ಬಲಿ ಹೋಮ

ಬಂಟ್ವಾಳ: ಸಜಿಪ ನಡುವಿನ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಾಮೂಹಿಕ ಆಶ್ಲೇಷ ಬಲಿ ಪೂಜೆ ಹಾಗೂ ಆಶ್ಲೇಷ ಬಲಿ ಹೋಮವು ನಡೆಯಿತು.

ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ನಡೆದ ಈ ಧಾರ್ಮಿಕ ವಿಧಿವಿಧಾನದಲ್ಲಿ ಊರವರು ಹಾಗೂ ಕುಟುಂಬದವರು ಶ್ರೀ ದೇವರ ಕೃಪೆಗೆ ಪಾತ್ರರಾಗಿ ಪ್ರಸಾದವನ್ನು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುಂಜ ವೆಂಕಟೇಶ್ವರ ಭಟ್, ಅರ್ಚಕ ಗಣಪತಿ ಮಹಾಬಲೇಶ್ವರ ಭಟ್, ಜಿ. ರಾಮಕೃಷ್ಣ ಭಟ್, ಕೆ ರಾಧಾಕೃಷ್ಣ ಆಳ್ವ, ಸುಧಾಕರ.ಕೆ.ಟಿ , ಸುಭಾಷ್ ಶೆಟ್ಟಿ, ಸೋಮನಾಥ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *