ಬಿಗ್‌ಬಾಸ್ ಸ್ಪರ್ಧಿ ರಂಜಿತ್ ವಿರುದ್ಧ ದೂರು ದಾಖಲು

ಬೆಂಗಳೂರು: ಜೀವ ಬೆದರಿಕೆ ಹಾಕಿದ ಆರೋಪದಡಿ ಬಿಗ್‌ ಬಾಸ್ ಸ್ಪರ್ಧಿ ರಂಜಿತ್ ವಿರುದ್ಧ ದೂರು ದಾಖಲಾಗಿದೆ.

ಅಮೃತಹಳ್ಳಿಯ ಫ್ಲ್ಯಾಟ್ ನಲ್ಲಿ ಜಗದೀಶ್ ಕುಟುಂಬ ವಾಸವಾಗಿದ್ದು, ಇದೇ ಫ್ಲ್ಯಾಟ್ ನಲ್ಲಿ ಅಕ್ಕ ಬಾವನ ಜೊತೆ ರಂಜಿತ್ ಕೂಡ ವಾಸವಿದ್ದರು. ಈ ಮನೆ ನನ್ನದು ಎಂದು ಅಕ್ಕ – ತಮ್ಮನ ನಡುವೆ ಗಲಾಟೆ ನಡೆದಿದ್ದು,ರಂಜಿತ್ ಪತ್ನಿ ಜೊತೆ ರಂಜಿತ್ ಅಕ್ಕ ಗಲಾಟೆ ಮಾಡಿದ್ದಾರೆ.

ಮಾತಿಗೆ ಮಾತು ಬೆಳೆದು ರಂಜಿತ್ ಜೀವ ಬೆದರಿಕೆ ಹಾಕಿದ್ದಾರೆ ಎಂದು ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಜಗದೀಶ್ ದೂರು ನೀಡಿದ್ದಾರೆ.

ಈ ಹಿನ್ನಲೆ ರಂಜಿತ್ ಅವರನ್ನು ಠಾಣೆಗೆ ಕರೆಸಿದ ಪೊಲೀಸರು ಕೋರ್ಟ್‌ ನಲ್ಲಿ ವಿವಾದ ಬಗೆಹರಿಸಿಕೊಳ್ಳುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *