Breaking
20 Sep 2026, Sun

ಇನ್ ಸ್ಟಾಗ್ರಾಂ ಪೇಜ್ ನಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಟ್ಟಿದ್ದ ಆರೋಪಿಯ ಬಂಧನ

ಮಂಗಳೂರು: ಕರಾವಳಿ ಟೈಗರ್ಸ್ ಎಂಬ ಇನ್ ಸ್ಟಾಗ್ರಾಂ ಪೇಜ್ ನಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಟ್ಟಿದ್ದ ಆರೋಪಿಯೋರ್ವನನ್ನು ಬಂಧಿಸಲಾಗಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಿ, ನ್ಯಾಯಾಂಗ ಬಂಧನ ವಿಧಿಸಿದೆ.

ಬಂಧಿತ ಆರೋಪಿಯನ್ನು ದಕ್ಷಿಣ ಕನ್ನಡದ ಮಾಲವಂತಿಗೆ, ಕಿಲ್ಲೂರು ಮನೆ ನಿವಾಸಿ ಮೊಹಮ್ಮದ್ ಕೈಫ್ (22) ಎಂದು ಗುರುತಿಸಲಾಗಿದೆ.

ಜುಲೈ 19ರಂದು ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಟ್ಟಿದ್ದ ಆರೋಪಿಯ ವಿರುದ್ಧ ಮಂಗಳೂರು ನಗರ ಪೊಲೀಸ್ ಠಾಣೆಯಲ್ಲಿ ಸಿ.ಇ.ಎನ್ ಅಪರಾಧ ಪ್ರಕರಣ ದಾಖಲಾಗಿತ್ತು. ಬಳಿಕ ಆರೋಪಿಯ ತಾಂತ್ರಿಕ ಸಾಕ್ಷ್ಯಗಳ ಆಧಾರದ ಮೇಲೆ ಆರೋಪಿಯನ್ನು ಪತ್ತೆ ಹಚ್ಚಿ, ಪೊಲೀಸರು ತಮಿಳುನಾಡಿಗೆ ತೆರಳಿ ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಯಿತು.

ಅಲ್ಲದೇ ಕರಾವಳಿ ಟೈಗರ್ಸ್ ಎಂಬ ಪೇಜ್ ವಿರುದ್ಧ ಮಂಗಳೂರು ನಗರದ ಬಜ್ಪೆ ಪೊಲೀಸ್ ಠಾಣೆಯಲ್ಲಿಯೂ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆಯುತ್ತಿದೆ.

Leave a Reply

Your email address will not be published. Required fields are marked *