Breaking
23 Dec 2024, Mon

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ: ಜಿ. ಪರಮೇಶ್ವರ್

ಹುಬ್ಬಳ್ಳಿ: ಮುಡಾ ವಿಚಾರದಲ್ಲಿ ಬಿಜೆಪಿ ಅನವಶ್ಯಕವಾಗಿ ರಾಜಕೀಯ ಮಾಡುತ್ತಿದೆ. ಪ್ರಧಾನಿ ಅಂಥವರು ವಿವಿಧ ರಾಜ್ಯಗಳ ಚುನಾವಣಾ ರ್‍ಯಾಲಿಗಳಲ್ಲಿ ಈ ಬಗ್ಗೆ ಪ್ರಸ್ತಾಪಿಸುತ್ತಿದ್ದಾರೆ. ನಮಗೂ ಸಹ ಇವರ ರೀತಿ ರಾಜಕಾರಣ ಮಾಡಲು ಬರುತ್ತದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಕಿಡಿಕಾರಿದ್ದಾರೆ.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ತನಿಖೆ ನಡೆಯುತ್ತಿದೆ. ಇದನ್ನು ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ. ಪ್ರಧಾನಿಯವರು ಈ ವಿಷಯವನ್ನು ಚುನಾವಣಾ ಪ್ರಚಾರದಲ್ಲಿ ಪ್ರಸ್ತಾಪಿಸುತ್ತಾರೆ. ಇದು ರಾಜಕಾರಣ ಅಲ್ಲದೇ ಮತ್ತಿನ್ನೇನು. ನಮಗೂ ರಾಜಕಾರಣ ಮಾಡಲು ಬರುತ್ತದೆ. ನಮ್ಮ ಕಾಂಗ್ರೆಸ್ ಸರ್ಕಾರ ಅದಕ್ಕೆ ಸಮರ್ಥ ಉತ್ತರ ಕೊಡುತ್ತದೆ ಎಂದು ಕುಟುಕಿದರು.

ನಾವು ಯಾರ ಮೇಲೂ ಸೇಡಿನ ರಾಜಕಾರಣ ಮಾಡುತ್ತಿಲ್ಲ. ಬಿಜೆಪಿಯವರು ಸೇಡಿನ ರಾಜಕಾರಣ ಮಾಡುತ್ತಿದ್ದಾರೆ. ಮುಡಾ ವಿಚಾರವಾಗಿ ಈಗಾಗಲೇ ತನಿಖೆ ನಡೆದಿದೆ. ಪ್ರತಿ ಪಕ್ಷದವರು ಸರ್ಕಾರಕ್ಕೆ ಸಲಹೆ, ಸೂಚನೆ ಕೊಡಬೇಕು. ಅದನ್ನು ಮೀರಿ ಅವರು ರಾಜಕಾರಣ ಮಾಡುತ್ತಿದ್ದಾರೆ ಎಂದರು.

Leave a Reply

Your email address will not be published. Required fields are marked *