Breaking
12 May 2026, Tue

ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಗರುಡ ಗ್ಯಾಂಗಿನ ಆರೋಪಿ ಬಂಧನ

ಉಡುಪಿ: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಗರುಡ ಗ್ಯಾಂಗಿನ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಕುಂದಾಪುರ ನಾವುಂದ ನಿವಾಸಿ ಮೊಹಮ್ಮದ್‌ ಆಸೀಪ್‌ ಎಂದು ಗುರುತಿಸಲಾಗಿದೆ.

ಸೆ. 18ರಂದು ಚಿಕ್ಕಮಗಳೂರು ನಗರದ ಗೌರಿ ಕಾಲುವೆ ಎಂಬಲ್ಲಿ ಆರೋಪಿಯನ್ನು ಪತ್ತೆ ಹಚ್ಚಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಅ.16ರವರೆಗ ನ್ಯಾಯಾಂಗ ಬಂದನ ವಿಧಿಸಿದೆ.

ಕಾಪು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಅಪರಾಧ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಇನ್ನೂ ಗಂಗೊಳ್ಳಿ ಪೊಲೀಸ್‌ ಠಾಣೆಯಲ್ಲಿ 4 ಪ್ರಕರಣಗಳು, ಬೈಂದೂರು ಪೊಲೀಸ್‌ ಠಾಣೆಯಲ್ಲಿ 2 ಪ್ರಕರಣ ಹಾಗೂ ಮಂಗಳೂರಿನ ಕಂಕನಾಡಿ ಪೊಲೀಸ್‌ ಠಾಣೆಯಲ್ಲಿ 2 ಹಾಗೂ ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ 2, ಪ್ರಕರಣಗಳು ದಾಖಲಾಗಿದ್ದು ಆರೋಪಿಯನ್ನು ಹಿರಿಯಡ್ಕದಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಲಾಗಿದೆ.

Leave a Reply

Your email address will not be published. Required fields are marked *