ಮಂಗಳೂರು: ಕೊಲೆ , ಸುಲಿಗೆ, ದಾಳಿ ಸೇರಿದಂತೆ ಅನೇಕ ಪ್ರಕರಣಗಳಲ್ಲಿ ಬಾಗಿಯಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ರೌಡಿ ಶೀಟರನ್ನು ಮಂಗಳೂರು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಬಂಟ್ವಾಳ ತಾಲೂಕು ನರಿಗಾನ ಗ್ರಾಮದ ಪಟ್ಟುಲಿಕೆ ನಿವಾಸಿ ನಜೀಮ್ ಅಲಿಯಾಸ್ ನಜ್ಜು (30) ಎಂದು ಗುರುತಿಸಲಾಗಿದೆ.

ಒಂದುವರೆ ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದು ಈತನ ವಿರುದ್ಧ ವಾರೆಂಟ್ ಕೂಡ ಹೊರಡಿಸಲಾಗಿತ್ತು. ಆದರೆ ಇದೀಗ ಆರೋಪಿಯನ್ನು ಮಂಗಳೂರು ದಕ್ಷಿಣ ಉಪ ಆಯುಕ್ತರವರ ಮಾರ್ಗದರ್ಶನದಲ್ಲಿ ಕೊಣಾಜೆ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳಾದ ದಿನೇಶ್ ಶರೀಪ್ ಮತ್ತು ರಮೇಶ್ ಅವರು ಬೆಂಗಳೂರಿನಲ್ಲಿ ಆರೋಪಿಯನ್ನು ವಶಕ್ಕೆ ಪಡೆದು ಬಂಧಿಸಿದ್ದಾರೆ.

ಆರೋಪಿ ವಿರುದ್ಧ ಕೊಣಾಜೆ, ಉಳ್ಳಾಲ, ಮಂಗಳೂರು ನಾರ್ತ್, ಬೇಗೂರು ಬೆಂಗಳೂರು ನಗರ, ಭಟ್ಕಳ ಪೊಲೀಸ್ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿದೆ ಎಂದು ತಿಳಿದು ಬಂದಿದೆ.




