ಬೆಳ್ತಂಗಡಿ: ಕೆಎಸ್‌ಆರ್‌ಟಿಸಿ ಬಸ್‌ಗೆ ಸ್ಕೂಟರ್ ಡಿಕ್ಕಿ ಹೊಡೆದು ಸವಾರ ಸಾವನ್ನಪ್ಪಿದ ಘಟನೆ ಸೆ.19ರ ಸಂಜೆ ಎನ್.ಸಿ ರೋಡ್ ಸಮೀಪ ನಡೆದಿದೆ.
ಮೃತರನ್ನು ಬೆಳ್ತಂಗಡಿ ತಾಲೂಕಿನ ಬಜಿರೆ ಕ್ರಾಸ್ ಕಟ್ಟೆ ನಿವಾಸಿ ರಾಜೇಶ್ (36) ಎಂದು ಗುರುತಿಸಲಾಗಿದೆ.

ಧರ್ಮಸ್ಥಳದಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೆಳ್ತಂಗಡಿ ಕಡೆಗೆ ಹೋಗುತ್ತಿದ್ದ ಸ್ಕೂಟರ್ ಮಧ್ಯೆ ಅಪಘಾತ ಸಂಭವಿಸಿದೆ.
ಘಟನೆಯಲ್ಲಿ ರಾಜೇಶ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣ ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ದಾರಿ ಮಧ್ಯೆಯೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.



