Breaking
29 Jun 2026, Mon

ನಯನಾಡು: ಸರಕಾರಿ ಪೌಡಶಾಲೆಯಲ್ಲಿ ಪ್ರಜಾವಾಣಿ’ ದಿಕ್ಸೂಚಿ ಶೈಕ್ಷಣಿಕ ಪುರವಣಿ ಬಿಡುಗಡೆ


ಬಂಟ್ವಾಳ:
ತಾಲೂಕಿನ ನಯನಾಡು ಸರಕಾರಿ ಪ್ರೌಡಶಾಲೆಯಲ್ಲಿ ಲೋರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ವತಿಯಿಂದ ಎಸ್.ಎಸ್.ಎಲ್ ಸಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮಾರ್ಗದರ್ಶನ ಕಾರ್ಯಕ್ರಮವು ಸೆ. 19 ರಂದು ನಡೆಯಿತು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಜಯಶೀಲ ಚಂದ್ರಶೇಖರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ‘ಪುಜಾವಾಣಿ’ ದಿಕ್ಸೂಚಿ ಶೈಕ್ಷಣಿಕ ಪುರವಣಿ ಬಿಡುಗುಡಗೊಳಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಮಾತನಾಡಿದ ಲೋರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ಅಧ್ಯಕ್ಷ ವಿಜಯ ಫರ್ನಾಂಡಿಸ್ ಅವರು ಸರಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟದ ಶಿಕ್ಷಣ ಗಳಿಸುವುದರ ಜೊತೆಗೆ ‘ಪ್ರಜಾವಾಣಿ’ ದಿನಪತ್ರಿಕೆ ಸಹಿತ ವಿವಿಧ ಮಾಧ್ಯಮಗಳ ಮೂಲಕ ಹೆಚ್ಚುವರಿ ಜ್ಞಾನ ಪಡೆದು ಶ್ರೀ.ಭಿಮಾನ ಮತ್ತು ನಾಯಕತ್ವ ಗುಣ ಬೆಳೆಸಿಕೊಳ್ಳಲು ಸಾಧ್ಯವಿದೆ ಎಂದರು.

ಕ್ಲಬ್ಬಿನ ವಲಯ ಸೇನಾನಿ ರಾಮಚಂದ್ರ ಶೆಟ್ಟಿಗಾರ್ ಅಣ್ಣಳಿಕೆ, ನಿಕಟಪೂರ್ವ ಅಧ್ಯಕ್ಷ ಸುರೇಶ ಶೆಟ್ಟಿ ಸಿದ್ದಕಟ್ಟೆ , ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ರವಿ ಕೆ ಶುಭ ಹಾರೈಸಿದರು. ಕ್ಲಬ್ಬಿನ ಕಾರ್ಯದರ್ಶಿ ಮೋಹನ್ ಕೆ. ಶ್ರೀಯಾನ್ ರಾಯಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿದ್ಯಾರ್ಥಿಗಳು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿ ಸದಸ್ಯ ಹರೀಶ ಶೆಟ್ಟಿ, ಶಿಕ್ಷಕಿಯರಾದ ಅನಿತಾ ಡಿಸೋಜ, ಡೋರಾ ಡಿಸಿಲ್ಲ, ಸುರೇಖ, ಸುಕನ್ಯಾ, ರತ್ನ ಮತ್ತಿತರರು ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕ ಜೋಯಲ್ ಲೋಬೊ ಸ್ವಾಗತಿಸಿ, ಶಿಕ್ಷಕ ಸತೀಶ್ ಕುಮಾರ್ ವಂದಿಸಿದರು. ಶಿಕ್ಷಕ ಜಯಪ್ರಕಾಶ್ ಕೆ.ಎಸ್ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *