ಮಾಂಗಲ್ಯ ಸರವನ್ನು ಕಳ್ಳತನ ಮಾಡಿದ ಆರೋಪಿಗೆ 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಬೆಳ್ತಂಗಡಿ: ಕೊಯ್ಯೂರು ಗ್ರಾಮದ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರ ಮಾಂಗಲ್ಯ ಸರವನ್ನು ಕಳ್ಳತನ ಮಾಡಿದ ಆರೋಪಿಗೆ 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.

2024 ಡಿ. 9 ರಂದು ಕೆಯ್ಯೂರಿನಲ್ಲಿ ಮಹಿಳೆಯೊಬ್ಬರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಆರೋಪಿ ಉಮೇಶ್ ಗೌಡ ಆಕೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಸಿದು ಪರಾರಿಯಾಗಿದ್ದನು.

ಈ ಕುರಿತು ಆರೋಪಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅದೇ ದಿನ ಆರೋಪಿಯನ್ನು ಬಂಧಿಸಲಾಯಿತು. ನಂತರ ಬೆಳ್ತಂಗಡಿ ಪೊಲೀಸ್ ಠಾಣೆ ಪೊಲೀಸ್ ನಿರೀಕ್ಷಕರಾದ ಸುಬ್ಬಾಪುರ್ ಮಠ್ ದೋಷರೋಪಣ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು. ವಿಚಾರಣೆ ನಡೆಸಿದ ಬಳಿಕ ನ್ಯಾಯಾಧೀಶರಾದ ಸಂದೇಶ್ ಅವರು ಆರೋಪ ಸಾಬೀತಾಗಿದೆ ಎಂದು ತೀರ್ಪು ನೀಡಿ 3 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 5,000 ರೂ. ದಂಡ ವಿಧಿಸಿದರು. ದಂಡ ಪಾವತಿಸದಿದ್ದಲ್ಲಿ ಆರು ತಿಂಗಳ ಕಾರಾಗೃಹ ವಾಸ ಅನುಭವಿಸಬೇಕು ಎಂದು ನ್ಯಾಯಾಲಯ ಆದೇಶಿಸಿದೆ.

Leave a Reply

Your email address will not be published. Required fields are marked *