ಬೆಂಗಳೂರು: ಕೇಂದ್ರ ಸರ್ಕಾರ ಆಹಾರ ಉತ್ಪನ್ನಗಳ ಮೇಲಿನ ಜಿಎಸ್ಟಿಯ ಇಳಿಕೆ ಬೆನ್ನಲ್ಲೇ ಇದೀಗ ನಂದಿನಿ ಮೊಸರು, ತುಪ್ಪ, ಬೆಣ್ಣೆ ಮತ್ತು ಲಸ್ಸಿ ಸೇರಿದಂತೆ ಹಲವು ಉತ್ಪನ್ನಗಳ ದರ ಇಳಿಕೆ ಆಗಿದ್ದು ಸೆ.22ರಿಂದ ಹೊಸ ದರ ಜಾರಿಗೆ ಬರುವ ಸಾಧ್ಯತೆ ಇದೆ.

ಈ ಬಗ್ಗೆ ಸೆ.19ರಂದು ಕೆಎಂಎಫ್ ಅಧಿಕಾರಿಗಳು ಸಭೆ ನಡೆಸಿದ್ದು, ಸಭೆಯಲ್ಲಿ ಯಾವುದರ ದರ ಎಷ್ಟು ಇಳಿಕೆ ಮಾಡಬೇಕು ಎಂಬುವುದನ್ನು ನಿರ್ಧಾರ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಆದರೆ ಅಧಿಕೃತ ಆದೇಶ ಬಾಕಿಯಿದೆ.
ಮೊಸರಿನ ದರ ಲೀಟರ್ಗೆ 4 ರೂ. ಇಳಿಕೆ ನಿರೀಕ್ಷೆ ಇದೆ. ಜೊತೆಗೆ ತುಪ್ಪ, ಬೆಣ್ಣೆ, ಲಸ್ಸಿ ಸೇರಿ ಹಲವು ಉತ್ಪನ್ನಗಳ ದರ ಕೂಡ ಇಳಿಕೆ ಆಗಿದೆ ಎನ್ನಲಾಗಿದೆ.

ಇತ್ತೀಚೆಗೆ ಕೇಂದ್ರ ಸರ್ಕಾರ ಹಾಲಿನ ಉತ್ಪನ್ನಗಳ ಮೇಲಿನ ಸರಕು ಸೇವಾ ತೆರಿಗೆಯನ್ನು ಶೇ.12ರಿಂದ 5ಕ್ಕೆ ಇಳಿಕೆ ಮಾಡಿದ್ದು ಈ ಬೆನ್ನಲ್ಲೆ ಕೆಎಂಎಫ್ ಈ ಹೊಸ ದರ ಜಾರಿಗೆ ನಿರ್ಧರಿಸಿದೆ.



