Breaking
29 Jun 2026, Mon

“ಹಾಲು ಮತ್ತು ಮೊಸರಿನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ” – ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಬಿ. ಶಿವಸ್ವಾಮಿ

ಬೆಂಗಳೂರು: ಆಹಾರ ಉತ್ಪನ್ನಗಳ ಮೇಲಿನ ಜಿಎಸ್ಟಿಯನ್ನು ಕೇಂದ್ರ ಸರ್ಕಾರ ಇಳಿಕೆಗೊಳಿಸಿದ ಬೆನ್ನಲ್ಲೇ ಕೆಎಂಎಫ್ ತನ್ನ ಹಲವು ಉತ್ಪನ್ನಗಳ ದರ ಇಳಿಕೆ ಮಾಡಲು ಮುಂದಾಗಿದ್ದು ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದೆ.

ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಬಿ. ಶಿವಸ್ವಾಮಿ ಅವರು ಶನಿವಾರ ಕೆಎಂಎಫ್ ಕೇಂದ್ರ ಕಚೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ “ಮಾರಾಟಗಾರರಿಗೆ ಹಳೆಯ ಉತ್ಪನ್ನಗಳನ್ನು ಹೊಸ ಪಟ್ಟಿಯಂತೆ ಮಾರಾಟ ಮಾಡಲು ಸೂಚಿಸಲಾಗಿದೆ. ಹಳೆಯ ದರದಲ್ಲಿ ಮಾರಾಟ ಮಾಡಿದರೆ ಸೂಕ್ತ ಕ್ರಮದ ಎಚ್ಚರಿಕೆ ನೀಡಲಾಗುವುದು ಎಂದಿದ್ದಾರೆ.

ಹಾಲು ಮತ್ತು ಮೊಸರಿನ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ ಆದರೆ ನಂದಿನಿ ತುಪ್ಪ, ಬೆಣ್ಣೆ, ಚೀಸ್, ಕುರುಕು ತಿಂಡಿಗಳ ಮೇಲಿನ ಜಿಎಸ್‌ಟಿ ಶೇ.12 ರಿಂದ 5ಕ್ಕೆ ಮತ್ತು ನಂದಿನಿ ಕುಕ್ಕಿಸ್, ಚಾಕೋಲೇಟ್ಸ್, ಐಸ್‌ಕ್ರೀಂ, ಇನ್ಸ್‌ಟಾಂಟ್ ಮಿಕ್ಸ್ ಮತ್ತು ಪ್ಯಾಕ್ಸ್ ನೀರಿನ ಮೇಲಿನ ಜಿಎಸ್‌ಟಿ ಶೇ.18 ರಿಂದ 5ಕ್ಕೆ ದರ ಇಳಿಸಿ, ನಂದಿನಿ ಪನೀರ್ ಮತ್ತು ಯುಹೆಚ್‌ಟಿ ಹಾಲಿನ ಉತ್ಪನ್ನಗಳ ಮೇಲಿನ ಜಿಎಸ್‌ಟಿ ಶೇ.5 ರಿಂದ 0. ರಂತೆ ಇಳಿಕೆ ಮಾಡಲಾಗಿದೆ. ಹೀಗಾಗಿ ಹಾಲು ಮತ್ತು ಮೊಸರಿನ ದರ ಬಿಟ್ಟು ಬೇರೆ ಉತ್ಪನ್ನಗಳ ಬೆಲೆ ಬದಲಾಯಿಸಲಾಗಿದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *