Breaking
12 May 2026, Tue

ಆಕಸ್ಮಿಕವಾಗಿ ನೀರಿಗೆ ಬಿದ್ದು ವಿದ್ಯಾರ್ಥಿ ಸಾವು

ಕಾಸರಗೋಡು: ಮೀನು ಹಿಡಿಯಲು ಗಾಳ ಹಾಕುತ್ತಿದ್ದಾಗ ಆಕಸ್ಮಿಕವಾಗಿ ನೀರಿಗೆ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಕಾಸರಗೋಡಿನ ತ್ರಿಕ್ಕರಿಪ್ಪುರ ಕವ್ವಾಯಿ ಎಂಬಲ್ಲಿ ಸೆ. 20 ರಂದು ನಡೆದಿದೆ.

ಮೃತ ವಿದ್ಯಾರ್ಥಿಯನ್ನು ವಲಿಯಪರಂಬ ಬೀರಾನ್ ಕಡವಿನ ನಿಸಾರ್ ಅವರ ಪುತ್ರ ಕೆ.ಪಿ. ಮುಹಮ್ಮದ್ (13) ಎಂದು ಗುರುತಿಸಲಾಗಿದೆ.

ಘಟನಾ ಸ್ಥಳಕ್ಕೆ ನಾಗರಿಕರು , ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಮುಳುಗಿದ ವಿದ್ಯಾರ್ಥಿಯನ್ನು ಮೇಲಕ್ಕೆತ್ತಿ ಆಸ್ಪತ್ರೆಗೆ ದಾಖಲಿಸಿದರೂ ಜೀವ ಉಳಿಸಲಾಗಲಿಲ್ಲ.

ಈ ಕುರಿತು ತ್ರಿಕ್ಕರಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *