ಕುಂಬಳೆ: ಕಾಸರಗೋಡು ಕುಂಬಳೆ ಶೇಡಿಕಾವು ಎಂಬಲ್ಲಿ ಕಟ್ಟಡದಿಂದ ಕಾರ್ಮಿಕನೊಬ್ಬ ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟ ವ್ಯಕ್ತಿ ಶೇಡಿಕಾವಿನ ಶಂಕರ ( 52) ಎಂದು ಗುರುತಿಸಲಾಗಿದೆ.

ಮನೆಯೊಂದರ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ವೇಳೆ ಅವರು ಎರಡನೇ ಮಹಡಿಯಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದರು. ತಕ್ಷಣವೇ ಕುಂಬಳೆ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ

ಈ ಕುರಿತು ಕುಂಬಳೆ ಠಾಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



