Breaking
7 May 2026, Thu

ಬಂಟ್ವಾಳ: ಗೋಹತ್ಯೆ ಅಡ್ಡೆಗೆ ಪೊಲೀಸ್‌ ದಾಳಿ: ಓರ್ವನ ಬಂಧನ, ಇಬ್ಬರು ಪರಾರಿ: 9 ದನಗಳ ರಕ್ಷಣೆ

ಬಂಟ್ವಾಳ: ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸಂಗಬೆಟ್ಟು ಗ್ರಾಮದ ಕೆರೆ ಬಳಿ ಅಕ್ರಮವಾಗಿ ದನಗಳನ್ನು ಕಡಿದು ಮಾಂಸ ಮಾಡುತ್ತಿದ್ದ ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿ ಆರೋಪಿಯೋರ್ವನನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮುಲ್ಕಿ ಕೃಷ್ಣಾಪುರ ಕಾರ್ನಾಡು ನಿವಾಸಿ ತೌಸೀಫ್‌ ಎಂದು ಗುರುತಿಸಲಾಗಿದೆ.

ನಾಸಿರ್ ಯಾನೆ ಹುಸೇನಬ್ಬ, ರಶೀದ್ ಮತ್ತು ಇತರರು ದನವನ್ನು ತಂದು ವಧೆ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಬಂಟ್ವಾಳ ಗ್ರಾಮಾಂತರ ಪೋಲೀಸರ ತಂಡ ದಾಳಿ ನಡೆಸಿದೆ. ಈ ವೇಳೆ ಒಂದು ದನವನ್ನು ವಧೆ ಮಾಡಿ ಮಾಂಸ ಮಾಡಲು ತಯಾರಿ ನಡೆಸುತ್ತಿರುವುದು ಮತ್ತು ವಧೆ ಮಾಡಲು 9 ದನಗಳನ್ನು ತಂದು ಕಟ್ಟಿ ಹಾಕಿರುವುದು ಬೆಳಕಿಗೆ ಬಂದಿದೆ.

ಈ 9 ದನಗಳನ್ನು ರಕ್ಷಿಸಿ ವಶಕ್ಕೆ ಪಡೆದ ಪೊಲೀಸರು ಅವುಗಳನ್ನು ಗೋಶಾಲೆಗೆ ಹಸ್ತಾಂತರಿಸಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳದಲ್ಲಿದ್ದ ಮಾಂಸ ಹಾಗೂ ಮಾಂಸ ಮಾಡಲು ಉಪಯೋಗಿಸಿದ ಸೊತ್ತುಗಳ ಸಹಿತ ಕೃತ್ಯಕ್ಕೆ ಬಳಸಿದ ವಾಹನ ಆಟೋರಿಕ್ಷಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಪೊಲೀಸರ ದಾಳಿ ವೇಳೆ ಪ್ರಮುಖ ಆರೋಪಿ ನಾಸೀರ್ ಸಹಿತ ಇತರರು ಪರಾರಿಯಾಗಿದ್ದು, ಕಾರ್ಯಚರಣೆ ಮುಂದುವರಿದಿದೆ.

ಆರೋಪಿಗಳ ವಿರುದ್ದ ಕರ್ನಾಟಕ ಜಾನುವಾರು ಹತ್ಯಾ ಪ್ರತಿಬಂಧಕ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಬಂಧಿತ ಆರೋಪಿಯನ್ನು ಬಂಟ್ವಾಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *