ಬಂಟ್ವಾಳ: ಶ್ರೀ ಬಾಲ ಗಣಪತಿ ದೇವಸ್ಥಾನ ಅನ್ನಪಾಡಿ ಸಜೀಪ ಮೂಡ ಇದರ ನಾಲ್ಕನೇ ವರ್ಷದ ಜಾತ್ರಾ ಮಹೋತ್ಸವ ಹಾಗೂ ಬ್ರಹ್ಮಕಲಶೋತ್ಸವದ ಲೋಕ ಕಲ್ಯಾಣಾರ್ಥವಾಗಿ ಬಾಲ ಗಣಪತಿ ಮೂಲ ಮಂತ್ರ ಲಕ್ಷ ಜಪಯಜ್ಞ ದೂರ್ವಾಹೋಮವು ಸೆ. 28 ಮತ್ತು 29 ರಂದು ಬ್ರಹ್ಮಶ್ರೀ ನೀಲೇಶ್ವರ ಕೆ .ಯು .ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಶ್ರದ್ಧಾ ಭಕ್ತಿಯಿಂದ ವಿಜೃಂಭಣೆಯಿಂದ ನಡೆಯಲಿದೆ.

ಈ ಮಹೋತ್ಸವದ ಪೂರ್ವಭಾವಿ ಸಿದ್ಧತಾ ಸಭೆಯು ಸೆ. 21 ರಂದು ಶ್ರೀ ಕ್ಷೇತ್ರದಲ್ಲಿ ಎಸ್ ಶ್ರೀಕಾಂತ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ಧಾರ್ಮಿಕ ಸಲಹೆಗಳನ್ನು ನೀಡಿದರು. ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಯಶವಂತ ದೇರಾಜೆ ಗುತ್ತು ಕಾರ್ಯಕ್ರಮದ ವಿವರಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಸಜೀಪ ನಡು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುಂಜ ವೆಂಕಟೇಶ್ವರ ಭಟ್, ಶ್ರೀ ಸದಾಶಿವ ದೇವಸ್ಥಾನ ಈಶ್ವರ ಮಂಗಳ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಗಿರೀಶ್ ಕುಮಾರ್ ಪೆರ್ವ, ನಂದಾವರ ವಿನಾಯಕ ಶಂಕರನಾರಾಯಣ ದುರ್ಗಾಂಬ ಕ್ಷೇತ್ರ ವ್ಯವಸ್ಥಾಪನ ಸಮಿತಿ ಸದಸ್ಯ ಸುಧೀರ್ ನಾಯಕ್ , ಅಯ್ಯಪ್ಪ ಸ್ವಾಮಿ ಮಂದಿರ ಮಾರ್ನಬೈ ಲು ಅರ್ಚಕ ಸಂಜೀವ ಗುರುಸ್ವಾಮಿ , ಚೆನ್ನಯ್ಯ ಸಾಲಿಯಾನ್ ಚೇಳುರು, ಆಡಳಿತ ಸಮಿತಿಯ ಗೌರವಾಧ್ಯಕ್ಷ ಕೆ ಸದಾನಂದ ಶೆಟ್ಟಿ ಹಾಗೂ ಸಜೀಪ ಮೂಡ, ಸ ಜೀಪ ನಡು, ಸಜಿಪ ಪಡು , ಸಜಿಪ ಮುನ್ನೂರು ಗ್ರಾಮದ ಧಾರ್ಮಿಕ ಸಾಂಸ್ಕೃತಿಕ ಶೈಕ್ಷಣಿಕ ಸಾಮಾಜಿಕ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಸಜೀಪ ಮೂಡ ಅಧ್ಯಕ್ಷ ರಮೇಶ್ ಅನ್ನಪಾಡಿ ಸ್ವಾಗತಿಸಿದರು , ಪ್ರಶಾಂತ್ ಕಂದೂರು ಮತ್ತು ಸತೀಶ್ ಕಾರ್ಯಕ್ರಮ ನಿರ್ವಹಿಸಿದರು. ಸುರೇಶ್ ಬಂಗೇರ ಧನ್ಯವಾದವಿತ್ತರು .
ಎರಡು ದಿನಗಳಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ, ವಿವಿಧ ಭಜನಾ ತಂಡಗಳಿಂದ ಭಜನೆ, ಯಕ್ಷಗಾನ ಹಾಗೂ ಅನ್ನದಾನ ಹಮ್ಮಿಕೊಳ್ಳಲು ತೀರ್ಮಾನಿಸಲಾಯಿತು.


