ಬಂಟ್ವಾಳ: ದರೋಡೆ ಪ್ರಕರಣದಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದು ಆರೋಪಿಯನ್ನು ವಿಟ್ಲ ಪೋಲೀಸರ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ.
ಬಂಧಿತ ಆರೋಪಿಯು ಮಂಜೇಶ್ವರ ಮೀಯಪದವು ಸಮೀಪದ ಚಿಗುರುಪದವು ನಿವಾಸಿ ಅಶ್ರಫ್ ಯಾನೆ ಚಿಲ್ಲಿ ಅಶ್ರಫ್ (32).

2015 ರಲ್ಲಿ ವಿಟ್ಲ ಪೇಟೆಯಲ್ಲಿ ಜಗದೀಶ್ ಕಾಮತ್ ಎಂಬವರಿಗೆ ಮೆಣಸಿನ ಹುಡಿ ಎರಚಿ ದರೋಡೆ ಮಾಡಿದ ಪ್ರಕರಣ ದಾಖಲಾಗಿತ್ತು. ಬಳಿಕ 2016 ರಲ್ಲಿ ಕೊಳ್ಳಾಡು ಗ್ರಾಮದ ವೈನ್ ಶಾಪ್ ನ ಬಾಗಿಲು ಮುರಿದು ನಗದು ಕಳ್ಳತನ ಮಾಡಿದ ಪ್ರಕರಣದ ಆರೋಪಿಯಾಗಿದ್ದ ಈತ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.

ಇದೀಗ ವಿಟ್ಲ ಪೊಲೀಸರು ಮನೆಯಿಂದಲೇ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ, ನ್ಯಾಯಾಲಯ ಈತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.



