Breaking
25 Sep 2026, Fri

ಕಲ್ಲಂದಡ್ಕದಲ್ಲಿ ನೀರಿಗೆ ಬಿದ್ದು ವಿದ್ಯಾರ್ಥಿ ಸಾವು

ವಿಟ್ಲ: ಆಕಸ್ಮಿಕವಾಗಿ ನೀರಿಗೆ ಬಿದ್ದು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಕುಳ ಗ್ರಾಮದ ಕಲ್ಲಂದಡ್ಕದಲ್ಲಿ ಸೆ. 21 ರಂದು ನಡೆದಿದೆ.

ಕಬಕ ನಿವಾಸಿ ಹಸೈನ್ ಎಂಬವರ ಪುತ್ರ ಮುಹಮ್ಮದ್ ಅಜ್ಮನ್ (15) ಮೃತ ದುರ್ದೈವಿ. ಅಜ್ಮನ್ ಪುತ್ತೂರಿನ ಸಾಲ್ಮರ ಪ್ರೌಢ ಶಾಲೆಯ 10ನೇ ತರಗತಿಯ ವಿದ್ಯಾರ್ಥಿಯಾಗಿದ್ದನು.

ಮುಹಮ್ಮದ್ ಅಜ್ಮನ್ ತನ್ನ ಸ್ನೇಹಿತರೊಂದಿಗೆ ಕೋರೆಯ ಬಳಿ ತೆರಳಿದ್ದ ವೇಳೆ ಆಕಸ್ಮಿಕವಾಗಿ ನೀರಿಗೆ ಬಿದ್ದು ಈ ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ತಕ್ಷಣ ಸ್ಥಳೀಯರು ಧಾವಸಿದರೂ ಕೂಡ ಜೀವ ಉಳಿಸಲು ಸಾಧ್ಯವಾಗಲಿಲ್ಲ.

ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *