ಚಾರ್ಮಾಡಿ: ನಿಯಂತ್ರಣ ತಪ್ಪಿ ಎರಡು ಕಾರುಗಳು ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಘಟನೆ ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ತಿರುವಿನಲ್ಲಿ ನಡೆದಿದೆ.
ಅಪಘಾತದ ತೀವ್ರತೆಗೆ ಕಾರುಗಳು ಸಂಪೂರ್ಣ ನಜ್ಜುಗುಜ್ಜಾಗಿದ್ದು ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯಿಂದ ಕೆಲ ಹೊತ್ತು ಸಂಚಾರ ಅಸ್ತವ್ಯಸ್ತವಾಗಿತ್ತು ಎನ್ನಲಾಗಿದೆ.




