Breaking
25 Sep 2026, Fri

ಇನ್ಫೋಸಿಸ್ ಮುಖ್ಯಸ್ಥೆ ಸುಧಾ ಮೂರ್ತಿಗೆ ಸೈಬರ್ ವಂಚನೆ ಯತ್ನ: ಸೈಬರ್ ಕ್ರೈಂನಲ್ಲಿ ದೂರು ದಾಖಲು

ಬೆಂಗಳೂರು: ಸೈಬರ್ ವಂಚನೆಯ ಯತ್ನ ರಾಜ್ಯದಲ್ಲಿ ಮುಂದುವರಿದಿದ್ದು, ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ ಅವರ ಮೇಲೂ ಸೈಬರ್ ವಂಚನೆಯ ಯತ್ನ ನಡೆದಿದೆ ಎಂದು ತಿಳಿದು ಬಂದಿದೆ.

ಸೆ.5 ರಂದು, ಸುಧಾ ಮೂರ್ತಿ ಅವರಿಗೆ ಒಬ್ಬ ಅಪರಿಚಿತ ವ್ಯಕ್ತಿಯಿಂದ ಕರೆ ಬಂದಿದ್ದು, ಆತನು ದೂರಸಂಪರ್ಕ ಸಚಿವಾಲಯದ ಉದ್ಯೋಗಿಯೆಂದು ಎಂದು ಪರಿಚಯಿಸಿಕೊಂಡಿದ್ದ. ಬಳಿಕ ನಿಮ್ಮ ಮೊಬೈಲ್ ನಂಬರ್ ಅನ್ನು ಆಧಾರ್‌ಗೆ ಲಿಂಕ್ ಮಾಡದೆ ನೋಂದಾಯಿಸಲಾಗಿದೆ ಎಂದಿದ್ದ. ಹಾಗಾಗಿ ವೈಯುಕ್ತಿಕ ಮಾಹಿತಿ ನೀಡಿ, ನಿಮ್ಮ ನಂಬರ್‌ನಿಂದ ಅಶ್ಲೀಲ ವೀಡಿಯೋ ಕಳಿಸಲಾಗ್ತಿದೆ. ಅದನ್ನ ನಾನು ನಿಲ್ಲಿಸಿದ್ದೇನೆ ಎಂದೆಲ್ಲ ಹೇಳಿದ್ದ.

ಇದರಿಂದ ಅನುಮಾನಗೊಂಡ ಸುಧಾ ಮೂರ್ತಿ, ಟ್ರೂಕಾಲರ್ ಬಳಸಿ ಕರೆ ಬಂದ ನಂಬರನ್ನು ಪರಿಶೀಲಿಸಿದಾಗ, ಅದರಲ್ಲಿ ಟೆಲಿಕಾಂ ಡೆಪಾರ್ಟ್ಮೆಂಟ್ ಎಂದು ತೋರಿಸಿತ್ತು. ಇದರಿಂದ ಎಚ್ಚೆತ್ತುಕೊಂಡ ಅವರು ಸೈಬರ್ ವಂಚಕರ ಟ್ರ‍್ಯಾಪ್‌ಗೆ ಒಳಗಾಗದೆ ಬೆಂಗಳೂರು ಸೈಬರ್ ಕ್ರೈಂ ಪೊಲೀಸರಿಗೆ ವಂಚಕನ ವಿರುದ್ಧ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *