Breaking
10 Jul 2026, Fri

ಕಡಬ: ಹೃದಯಾಘಾತದಿಂದ ವ್ಯಕ್ತಿ ಸಾವು

ಕಡಬ: ಹೃದಯಾಘಾತದಿಂದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಸೆ. 21 ರಂದು ಕಡಬದಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಕಡಬ ಗ್ರಾಮದ ಪಿಜಕಳ ಪರಪ್ಪು ನಿವಾಸಿ ಜನಾರ್ದನ ನಾಯ್ಕ ಅವರ ಪುತ್ರ ವಿನೋದ್ ಪಿ.ಜೆ.(23) ಎಂದು ಗುರುತಿಸಲಾಗಿದೆ. ಇವರು ಮೈಸೂರಿನಲ್ಲಿ ಖಾಸಗಿ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

ಸೆ.21 ರಂದು ರಾತ್ರಿ ಊಟ ಮಾಡುತ್ತಿದ್ದ ವೇಳೆ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *