Breaking
22 Mar 2026, Sun

ಕಾಪುವಿನಲ್ಲಿ ಅಪರಿಚಿತ ವಾಹನ ಸ್ಕೂಟರ್ ಗೆ ಡಿಕ್ಕಿ: ಸ್ಕೂಟರ್ ಸವಾರ ಸಾವು

ಉಡುಪಿ: ಅಪರಿಚಿತ ವಾಹನವೊಂದು ಸ್ಕೂಟರ್‌ ಗೆ ಡಿಕ್ಕಿ ಹೊಡೆದು ಸ್ಕೂಟರ್‌ ಸವಾರ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕಾಪುವಿನಲ್ಲಿ ನಡೆದಿದೆ.

ಸಂತೆಕಟ್ಟೆಯ ನಿವಾಸಿ ಅನೂಶ್ ಭಂಡಾರಿ (21) ಮೃತ ದುರ್ದೈವಿ.

ಸೆ. 21 ರ ರಾತ್ರಿ ಸ್ಕೂಟಿಯಲ್ಲಿ ಸಂಚರಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು ಅನೂಶ್‌ ರಸ್ತೆಗೆ ಬಿದ್ದಿದ್ದಾನೆ. ನಂತರ ಬೇರೆ ವಾಹನಗಳು ದೇಹದ ಮೇಲೆ ಹರಿದಿರುವ ಶಂಕೆ ವ್ಯಕ್ತವಾಗಿದ್ದು ಮೃತದೇಹ ಸಂಪೂರ್ಣ ನಜ್ಜು ಗುಜ್ಜಾದ ಸ್ಥಿತಿಯಲ್ಲಿತ್ತು ಎಂದು ತಿಳಿದುಬಂದಿದೆ.

ಸ್ಕೂಟರ್ ಗೆ ಡಿಕ್ಕಿ ಹೊಡೆದ ಅಪರಿಚಿತ ವಾಹನದ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ . ಈ ಕುರಿತು ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *