Breaking
22 Mar 2026, Sun

ಶ್ರೀ ಕ್ಷೇತ್ರ ಪೂಂಜದ ಶ್ರೀ ಪಂಚದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಶಾಶ್ವತ ದೀಪ ಅಳವಡಿಕೆ

ಬೆಳ್ತಂಗಡಿ : ಶ್ರೀ ಕ್ಷೇತ್ರ ಪೂಂಜದ ಶ್ರೀ ಪಂಚದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಊರ – ಪರವೂರ ಭಕ್ತಾಭಿಮಾನಿಗಳ ಸಹಕಾರದೊಂದಿಗೆ ಹೊರಂಗಣದ ಸುತ್ತ ಶಾಶ್ವತದೀಪ (ಸ್ಟ್ರೀಟ್ ಲೈಟ್) ಅಳವಡಿಸಲಾಗಿದ್ದು ಇದರ ಉದ್ಘಾಟನಾ ಕಾರ್ಯಕ್ರಮವು ಸೋಮವಾರ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಕ್ಷೇತ್ರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸುದರ್ಶನ್ ಶೆಟ್ಟಿ ಹಕ್ಕೇರಿಯವರು ಕ್ಷೇತ್ರದ ಅಭಿವೃದ್ಧಿಗೆ ಸಮಿತಿಯು ನಿರಂತರವಾಗಿ ಶ್ರಮಿಸುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಪೂಂಜದ ಅಸ್ರಣ್ಣರು ಕೃಷ್ಣ ಪ್ರಸಾದ್ ಆಚಾರ್ಯ, ಪ್ರಧಾನ ಅರ್ಚಕರಾದ ಪ್ರಕಾಶ್ ಆಚಾರ್ಯ, ಅರ್ಚಕರು ಲಕ್ಷ್ಮೀ ನಾರಾಯಣ ಆಚಾರ್ಯ ಪೊಕ್ಕಿ , ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ರತ್ನ ಕುಮಾರ್ ಚೌಟ, ಸದಸ್ಯರಾದ ಉಮೇಶ್ ಶೆಟ್ಟಿ ಕೊನೆರೊಟ್ಟು, ರಂಜಿನಿ ದಿವಾಕರ್ ಮಾದಾಯಿ, ಸುರೇಶ್ ನೀರಪಲ್ಕೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *