ಬಂಟ್ವಾಳ: ಸ್ಕೂಟರ್ ಸವಾರ ನಿಯಂತ್ರಣ ತಪ್ಪಿ ಪೊಲೀಸ್ ಜೀಪ್ ಗೆ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ಪುಂಜಾಲಕಟ್ಟೆಯಲ್ಲಿ ನಡೆದಿದೆ.
ಗಾಯಗೊಂಡ ವ್ಯಕ್ತಿಯನ್ನು ಪಿಲಾತಬೆಟ್ಟು ನಿವಾಸಿ ಹರ್ಷಿತ್ (19) ಎಂದು ಗುರುತಿಸಲಾಗಿದೆ.

ಧರ್ಮಸ್ಥಳ ಪೋಲೀಸ್ ಠಾಣೆಯ ಪಿಎಸ್‌ಐ ಮಂಗಳೂರು ನ್ಯಾಯಾಲಯಕ್ಕೆ ಹೋಗುತ್ತಿದ್ದ ವೇಳೆ ಪುಂಜಾಲಕಟ್ಟೆ ಕಟ್ಟೆಮನೆ ರಾಷ್ಟ್ರೀಯ ಹೆದ್ದಾರಿ ತಿರುವಿನಲ್ಲಿ ಸ್ಕೂಟರ್ ನಿಯಂತ್ರಣ ತಪ್ಪಿ ಪೋಲೀಸ್ ಜೀಪ್ ಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಹರ್ಷಿತ್ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದು ತಕ್ಷಣವೇ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿದೆ.




