Breaking
22 Mar 2026, Sun

ನಕಲಿ ಮದ್ಯ ತಯಾರಿಕಾ ಅಡ್ಡೆಗೆ ಅಬಕಾರಿ ಅಧಿಕಾರಿಗಳಿಂದ ದಾಳಿ: ಆರೋಪಿ ಅಂದರ್

ಮಂಗಳೂರು: ನಕಲಿ ಮದ್ಯ ತಯಾರಿಸುತ್ತಿದ್ದ ಅಡ್ಡೆಗೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ನಕಲಿ ಮದ್ಯ ಮೈಕಲ್ ಬ್ಲೈಸ್ ಮಿನೀಜಸ್ ಎಂಬುವರ ಮನೆಯಲ್ಲಿ ತಯಾರಿಸಲಾಗುತ್ತದೆ ಎಂಬ ಮಾಹಿತಿ ಪಡೆದ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ ಮನೆಯಲ್ಲಿದ್ದ ನಕಲಿ ವೈನ್ – 238.500 ಲೀಟರ್, ವೈನ್ ತಯಾರಿಸುವ ಕೊಳೆ – 1,500 ಲೀಟರ್, ಮದ್ಯ – 3.180 ಲೀಟರ್ , ನಕಲಿ ವೈನ್ ತಯಾರಿಸುವ ಸಲಕರಣೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಸೆ.22 ರಂದು ಮಂಗಳೂರು ವಿಭಾಗದ ಅಬಕಾರಿ ಜಂಟಿ ಆಯುಕ್ತರು ನಿರ್ದೇಶನದಂತೆ , ದ.ಕ.ಜಿಲ್ಲೆ ಅಬಕಾರಿ ಉಪ ಆಯುಕ್ತರು ಮಾರ್ಗದರ್ಶನದಂತೆ, ಅಬಕಾರಿ ಉಪ ಅಧೀಕ್ಷಕರು ಮಂಗಳೂರು ಉಪ ವಿಭಾಗ-1, ಮತ್ತು ಮಂಗಳೂರು, ಅಬಕಾರಿ ನಿರೀಕ್ಷರರು, ತಲಪಾಡಿ ತನಿಖಾ ಠಾಣೆ ಯ ಅಬಕಾರಿ ನಿರೀಕ್ಷಕರು ಮತ್ತು ಮಂಗಳೂರು ದಕ್ಷಿಣ ವಲಯ -1 ರ ಅಬಕಾರಿ ನಿರೀಕ್ಷಕರವರ ನೇತೃತ್ವದಲ್ಲಿ ವಲಯದ ಅಬಕಾರಿ ಉಪ ನಿರೀಕ್ಷಕರ ಸಿಬ್ಬಂದಿಗಳು ಸೇರಿ ದಾಳಿ ನಡೆಸಿದರು.

ಬಂಧಿತ ಆರೋಪಿಯ ವಿರುದ್ಧ ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 13(1)(a), 13(1)(f), 14,15,32(1),32(2),(e), 34,38(A) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರು ದಕ್ಷಿಣ ವಲಯ -1 ಕಚೇರಿಯ ಅಬಕಾರಿ ಉಪ ನಿರೀಕ್ಷಕರಾದ ಹರೀಶ್ ಪಿ. ಇವರು ಮೊಕದ್ದಮೆಯನ್ನು ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *