Breaking
25 Sep 2026, Fri

ಸಜೀಪ ಮುನ್ನೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನವರಾತ್ರಿ ಅಂಗವಾಗಿ ಶ್ರೀ ದುರ್ಗಾ ನಮಸ್ಕಾರ ಪೂಜೆ

ಬಂಟ್ವಾಳ: ಸಜೀಪ ಮುನ್ನೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನವರಾತ್ರಿಯ ಪ್ರಯುಕ್ತ ಶ್ರೀ ದುರ್ಗಾ ನಮಸ್ಕಾರ ಪೂಜೆ, ಭಜನೆ ನಡೆಯಿತು.

ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ನಡೆದ ಪೂಜೆಯಲ್ಲಿ ಊರವರು ಹಾಗೂ ಕುಟುಂಬದವರು ಶ್ರೀ ದೇವರ ಕೃಪೆಗೆ ಪಾತ್ರರಾಗಿ ಪ್ರಸಾದವನ್ನು ಸ್ವೀಕರಿಸಿದರು. ಈ ವೇಳೆ ಭಕ್ತರಿಗೆ ಅನ್ನಸಂತರ್ಪಣೆಯು ನಡೆಯಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಜಯ ಶಂಕರ ಬಾಸ್ರಿತಾಯ, ಸಜೀಪ ನಡು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುಂಜ ವೆಂಕಟೇಶ್ವರ ಭಟ್, ಬಾಲ ಗಣಪತಿ ದೇವಸ್ಥಾನ ಅನ್ನಪಾಡಿ ಆಡಳಿತ ಸಮಿತಿ ಅಧ್ಯಕ್ಷ ಯಶವಂತ ದೇರಾಜೆ, ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಮಂಜಲ್ ಪಾದೆ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎಂ ಕೃಷ್ಣ ಶ್ಯಾಮ್ ಶಶಿರಾಜ ರಾವ್, ರವೀಂದ್ರ ಕಂಬಳಿ, ಅರ್ಚಕ ಕೃಷ್ಣ ಭಟ್, ಎನ್ ಕೆ ಶಿವ, ಶ್ರೀನಿವಾಸ್ ನಾಯಕ್, ಕಾವ್ಯಶ್ರೀ, ರಾಜೇಶ್ ಪೂಜಾರಿ, ಕವಿತಾ, ಹರಿಪ್ರಸಾದ್ ಭಂಡಾರಿ, ಧನಂಜಯ್ ಶೆಟ್ಟಿ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *