Breaking
25 Sep 2026, Fri

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ: ಆರೋಪಿ ಬಂಧನ

ವಿಟ್ಲ: ಮನೆಯವರು ಕೆಲಸಕ್ಕೆ ತೆರಳಿದ್ದ ವೇಳೆ ಅಪ್ರಾಪ್ತ ಬಾಲಕಿಯ ಮನೆಗೆ ನುಗ್ಗಿ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದ್ದು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನ ವಿಧಿಸಿದೆ.

ಬಂಧಿತ ಆರೋಪಿಯನ್ನು ವಿಟ್ಲದ ಸ್ಥಳೀಯ ನಿವಾಸಿ ನಾರಾಯಣ (42) ಎಂದು ಗುರುತಿಸಲಾಗಿದೆ.

ಪೋಷಕರು ಕೆಲಸಕ್ಕೆ ಹೋಗಿದ್ದ ವೇಳೆ ಮನೆಗೆ ಬಂದು ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ.

ಈ ಕುರಿತು ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *