Breaking
23 Dec 2024, Mon

ಸಂಸದೀಯ ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ. ಬ್ರಿಜೇಶ್ ಚೌಟ ನೇಮಕ

ಮಂಗಳೂರು: ಸಂಸದೀಯ ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ನೇಮಕಗೊಂಡಿದ್ದಾರೆ.

ಈ ಸ್ಥಾಯಿ ಸಮಿತಿಯು ಕೇಂದ್ರ ಇಂಧನ ಹಾಗೂ ನವೀಕರಿಸಬಹುದಾದ ಇಂಧನ ಸಚಿವಾಲಯದ ಮೇಲುಸ್ತುವಾರಿಗಳ ಬಗ್ಗೆ ಕಾರ್ಯನಿರ್ವಹಿಸಲಿದೆ.

ಇದೀಗ ಈ ಸ್ಥಾಯಿ ಸಮಿತಿಗೆ ನೇಮಕಗೊಂಡಿರುವ ಕ್ಯಾ. ಚೌಟ ಅವರು ಇಂಧನ ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲ ರೀತಿಯ ನೀತಿ-ನಿಯಮಗಳು, ಕಾರ್ಯಯೋಜನೆಗಳ ಬಗ್ಗೆ ಪುನರ್‌ ಪರಿಶೀಲಿಸುವ ಹಾಗೂ ನಿಗಾ ವಹಿಸುವಲ್ಲಿ ಪಾತ್ರವಹಿಸಲಿದ್ದಾರೆ.

ಈ ಸಂಸದೀಯ ಸ್ಥಾಯಿ ಸಮಿತಿಯ ಮೊದಲ ಸಭೆಯು ಇಂದು ನಡೆಯಲಿದೆ.

Leave a Reply

Your email address will not be published. Required fields are marked *