Breaking
25 Sep 2026, Fri

ಮಹೇಶ್ ಶೆಟ್ಟಿ ತಿಮರೋಡಿಗೆ ಗಡಿಪಾರು ಆದೇಶ : ನೋಟಿಸ್ ನೀಡಲು ಪೊಲೀಸರ ಸಿದ್ಧತೆ

ಬೆಳ್ತಂಗಡಿ : ಸೌಜನ್ಯ ನ್ಯಾಯ ಪರ ಹೋರಾಟಗಾರರಾಗಿ ಮುಂಚೂಣಿಯಲ್ಲಿದ್ದ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ಗಡಿಪಾರು ಆದೇಶವಾಗಿದ್ದು, ಪೊಲೀಸರು ಗಡಿಪಾರು ನೋಟಿಸ್ ನೀಡಲು ಸಿದ್ಧತೆ ನಡೆಸುತ್ತಿದ್ದಾರೆ.

ಇವರ ವಿರುದ್ಧ ವಿವಿಧ ಠಾಣೆಗಳಲ್ಲಿ ಸುಮಾರು 32 ಪ್ರಕರಣಗಳು ದಾಖಲಾಗಿದ್ದು, ಈ ಹಿನ್ನಲೆಯಲ್ಲಿ ಬೆಳ್ತಂಗಡಿ ಪೊಲೀಸರು ಸಲ್ಲಿಸಿದ ಕೋರಿಕೆಯನ್ನು ಮನ್ನಿಸಿ ಪುತ್ತೂರು ಎಸಿ ಅವರು ಮಹೇಶ್ ಶೆಟ್ಟಿ ತಿಮರೋಡಿಯವರನ್ನು ಗಡಿಪಾರು ಮಾಡಿ ಆದೇಶ ಹೊರಡಿಸಿದ್ದರು.

ಸದ್ಯ ಮಹೇಶ್ ಶೆಟ್ಟಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಲ್ಲದೆ ತಲೆಮರೆಸಿಕೊಂಡಿರುವುದರಿಂದ ಚಿಕ್ಕಮಗಳೂರು ಅಥವಾ ಬೆಂಗಳೂರಲ್ಲಿ ಇರುವ ಕಾರಣದಿಂದ ಸೆ.24 ರಂದು ದಕ್ಷಿಣ ಕನ್ನಡ ಜಿಲ್ಲಾ ಎರಡು ಪೊಲೀಸರ ತಂಡ ನೋಟಿಸ್ ನೀಡಲು ತೆರಳಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *