Breaking
22 Mar 2026, Sun

ಡಿವೈಡರ್‌ಗೆ ಡಿಕ್ಕಿ ಹೊಡೆದ ಲಾರಿ: ಚಾಲಕ ಪ್ರಾಣಾಪಾಯದಿಂದ ಪಾರು

ಹಾವೇರಿ: ಲಾರಿಯೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಎರಡು ತುಂಡಾದ ಘಟನೆ ಹಾವೇರಿಯ ರಟ್ಟಿಹಳ್ಳಿ ತಾಲೂಕಿನ ಹಳ್ಳೂರು ಗ್ರಾಮದ ಬಳಿ ನಡೆದಿದೆ.

ಕಬ್ಬಿಣ ತುಂಬಿಕೊಂಡು ಹೊನ್ನಾಳಿ ಕಡೆ ಸಾಗುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಇಂಜಿನ್ ಒಂದು ಕಡೆ, ಲಾರಿಯ ಹಿಂಭಾಗ ಇನ್ನೊಂದು ಕಡೆ ತುಂಡಾಗಿ ಬಿದ್ದಿದೆ.

ಅದೃಷ್ಟವಶಾತ್, ಲಾರಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ.

ಸ್ಥಳೀಯ ಪೊಲೀಸ್‌ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ

Leave a Reply

Your email address will not be published. Required fields are marked *