Breaking
22 Mar 2026, Sun

ಆಸಿಡ್‌ ಸೇವಿಸಿ ರಿಕ್ಷಾ ಚಾಲಕ ಸಾವು

ಕಾಸರಗೋಡು: ರಿಕ್ಷಾ ಚಾಲಕ ಮನನೊಂದು ಆಸಿಡ್‌ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.24 ರಂದು ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಪಲ್ಲಂಜಿ ನಿವಾಸಿ ಕೆ. ಅನೀಶ್ (40) ಎಂದು ಗುರುತಿಸಲಾಗಿದೆ.

ಸೆ. 23 ರಂದು ಸಂಜೆ ಅನೀಶ್‌ ಅವರು ಶಾಲಾ ಮಕ್ಕಳನ್ನು ಆಟೋ ರಿಕ್ಷಾದಲ್ಲಿ ಕರೆದುಕೊಂಡು ಹೋಗುವಾಗ ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ಆಟೋದ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಪಲ್ಟಿಯಾಗಿ ಮೂವರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿದ್ದರು. ಈ ಘಟನೆಯಿಂದ ಆಘಾತಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಆಸಿಡ್‌ ಸೇವಿಸಿದ ಬಳಿಕ ಅವರ ಸ್ಥಿತಿ ಗಂಭೀರವಾಗಿದ್ದರಿಂದ ಸ್ಥಳೀಯರು ಅವರನ್ನು ತಕ್ಷಣ ಕಾಸರಗೋಡು ಜನರಲ್ ಆಸ್ಪತ್ರೆಗೆ ದಾಖಲಿಸಿದರು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಗಾಯಗೊಂಡ ವಿದ್ಯಾರ್ಥಿಗಳು ಪ್ರಸ್ತುತ ಕಾಸರಗೋಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಬೇಡಡ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *