Breaking
22 Mar 2026, Sun

ವೀರಕಂಭ ಗ್ರಾಮದಲ್ಲಿ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಚಾಲನೆ

ಕಲ್ಲಡ್ಕ : ರಾಜ್ಯದ ಜನತೆಯ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಯನ್ನು ನಿಖರವಾಗಿ ದಾಖಲಿಸುವ ಸಲುವಾಗಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸೆ. 22 ರಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಾರಂಭಗೊಂಡಿದೆ. ಅದರ ಅಂಗವಾಗಿ ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮ ವ್ಯಾಪ್ತಿಯಲ್ಲಿ ಸಮೀಕ್ಷೆಗೆ ಚಾಲನೆ ನೀಡಲಾಯಿತು.

ಮಜಿ ಶಾಲಾ ಶಿಕ್ಷಕಿ ಶ್ರೀಮತಿ ಸಂಗೀತ ಶರ್ಮ ಪಿ ಜಿ ಅವರು ವೀರಕಂಭ ಗ್ರಾಮದ ಕೆಲಿಂಜ ಕೊಟ್ಟಾರಿ ಕಟ್ಟೆ ಮತ್ತು ಬೆಂಜತಿಮಾರ್ ಪ್ರದೇಶದಲ್ಲಿ ಗಣತಿ ಆರಂಭಿಸಿದರು.

ಈ ಸಂದರ್ಭದಲ್ಲಿ ವೀರಕಂಭ ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ರೆಹಿಮಾನ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *