ಬಂಟ್ವಾಳ: ಸಜೀಪ ಮೂಡದ ಅನ್ನಪಾಡಿ ಶ್ರೀ ಬಾಲ ಗಣಪತಿ ದೇವಸ್ಥಾನದಲ್ಲಿ ಶ್ರೀ ಲಲಿತಾ ಪಂಚಮಿ ಅಂಗವಾಗಿ ದೇವಾಲಯದ ಶ್ರೀ ನಾಗದೇವರಿಗೆ ಫಲಪಂಚಾಮೃತ ಅಭಿಷೇಕ ಹಾಗೂ ನಾಗತಂಬಿಲ ಸೇವೆಯು ಜರುಗಿತು.

ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ನಡೆದ ಈ ಧಾರ್ಮಿಕ ವಿಧಿವಿಧಾನದಲ್ಲಿ ಊರವರು ಹಾಗೂ ಕುಟುಂಬದವರು ಶ್ರೀ ದೇವರ ಕೃಪೆಗೆ ಪಾತ್ರರಾಗಿ ಪ್ರಸಾದವನ್ನು ಸ್ವೀಕರಿಸಿದರು.





