Breaking
22 Mar 2026, Sun

ಬೈಕ್‌ಗೆ ವಾಟರ್ ಟ್ಯಾಂಕ‌ರ್ ಡಿಕ್ಕಿ: ತಂದೆ ಸಾವು, ಮಗ ಪ್ರಾಣಾಪಾಯದಿಂದ ಪಾರು

ಬೆಂಗಳೂರು: ಬೈಕ್‌ಗೆ ವಾಟರ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ತಂದೆ ಮೃತಪಟ್ಟು, ಮಗ ಅಪಾಯದಿಂದ ಪಾರಾದ ಘಟನೆ ಬೆಂಗಳೂರಿನ ವೈಟ್ ಫೀಲ್ಡ್‌ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕೋಲಾರದ ಮುನಿರಾಜು(52) ಸಾವನ್ನಪ್ಪಿದವರು. ಇವರ ಮಗ ಧನಂಜಯ ಗೌಡ(16) ಸಣ್ಣಪುಟ್ಟ ಗಾಯಗೊಂಡು ಪಾರಾಗಿದ್ದಾರೆ.

ಮುನಿರಾಜು ಅವರು ಮಗನನ್ನು ಬೈಕಿನಲ್ಲಿ ಕರೆದುಕೊಂಡು ಹೋಗುತ್ತಿದ್ದ ವೇಳೆ ಅತೀ ವೇಗದಿಂದ ಬಂದ ವಾಟರ್ ಟ್ಯಾಂಕರ್ ಬೈಕಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರೂ ರಸ್ತೆಗೆ ಬಿದ್ದಿದ್ದು, ಧನಂಜಯ ಗೌಡ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾದರೆ ಮುನಿರಾಜು ಅವರ ತಲೆ ಹಾಗೂ ಕಾಲಿಗೆ ಗಂಭೀರ ಗಾಯಗಳಾಗಿದ್ದು ತಕ್ಷಣ ಸ್ಥಳೀಯರು ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಚಿಕಿತ್ಸೆಗೆ ಸ್ಪಂದಿಸದ ಅವರು ಕೊನೆಯುಸಿರೆಳೆದಿದ್ದಾರೆ.

ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *