ಉಡುಪಿ: ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿದ ಟಿಪ್ಪರ್ ಬೈಕ್ ಗೆ ಡಿಕ್ಕಿ ಹೊಡೆದು, ಸವಾರರು ಗಂಭೀರ ಗಾಯಗೊಂಡ ಘಟನೆ ಕಲ್ಸಂಕ-ಗುಂಡಿಬೈಲು ಸಮೀಪ ನಡೆದಿದೆ.

ಗಾಯಾಳು ಗಣೇಶ್ ಕರ್ಕೇರ ಹಾಗೂ ಗಜೇಂದ್ರ ಅವರನ್ನು ಸ್ಥಳೀಯರು ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಿದ್ದು, ಚಿಕಿತ್ಸೆ ಮುಂದುವರಿದಿದೆ.
ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.





