ಜಮ್ಮುಮತ್ತು ಕಾಶ್ಮೀರ : ಪೆಹಲ್ಗಾಮ್ ಭಯೋತ್ಪಾದಕ ದಾಳಿಯ ಸಂದರ್ಭ ಉಗ್ರರಿಗೆ ಸಹಾಯ ಮಾಡಿದ್ದ ಜಮ್ಮು ಮತ್ತು ಕಾಶ್ಮೀರದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಗುಪ್ತಚರ ಮಾಹಿತಿ ಮೇರೆಗೆ ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಮೊಹಮ್ಮದ್ ಯೂಸುಫ್ ಕಟಾರಿ (26) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಈತ ಕುಲ್ಗಾಮ್ ಜಿಲ್ಲೆಯಲ್ಲಿ ಕಾರ್ಮಿಕನಾಗಿ, ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದು ಪಾಕಿಸ್ತಾನದ ಲಷ್ಕರ್ ಎ ತೈಬಾ ಭಯೋತ್ಪಾದಕ ಗುಂಪಿನೊಂದಿಗೆ ಸಂಪರ್ಕದಲ್ಲಿದ್ದ ಎನ್ನಲಾಗಿದೆ.

ಏ. 22 ರಂದು ಪೆಹಲ್ಲಾಮ್ ನಲ್ಲಿ ನಡೆದ ದಾಳಿಯ ವೇಳೆ ಮೊಹಮ್ಮದ್ ಯೂಸುಫ್ ಲಷ್ಕರ್-ಎ-ತೈಬಾ ಭಯೋತ್ಪಾದಕರಿಗೆ ಈತ ಸಹಾಯ ಮಾಡಿದ್ದ ಎಂಬ ಆರೋಪದ ಮೇಲೆ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಸದ್ಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.




