ಬಂಟ್ವಾಳ: ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ವತಿಯಿಂದ ಇಲ್ಲ್ ದಿಂಜಾವುನ ಪೊರ್ಲು, ಪುದ್ದರ್ ಲೇಸ್ದ ಗೌಜಿ ಮತ್ತು ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ ಅಕ್ಟೋಬರ್ ೧೩ರಂದು ಪೊಸಳ್ಳಿ ಕುಲಾಲ ಸಮುದಾಯ ಭವನದಲ್ಲಿ ನಡೆಯಲಿದೆ.
ಬೆಳಿಗ್ಗೆ ತುಳುನಾಡಿನ ಸಂಪ್ರದಾಯವಾದ ಭತ್ತದ ತೆನೆಗೆ ಪೂಜೆ ಮಾಡಿ ಮನೆ ತುಂಬಿಸುವ ಕಾರ್ಯಕ್ರಮ ಇಲ್ಲ್ ದಿಂಜಾವುನ ಪೊರ್ಲು ನಡೆಯಲಿದೆ. ನಂತರ ನಡೆಯುವ ನಡೆಯುವ ಸಭಾಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ ವಿತರಣೆ, ನಿರಂತರ ವಿದ್ಯಾರ್ಥಿ ವೇತನ ವಿತರಣೆ, ವಿದ್ಯಾರ್ಥಿ ವೇತನ ವಿತರಣೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಮಣಿಪಾಲ ರೇಡಿಯೋ ಮಣಿಪಾಲದ ಸಂಶೋಧಕಿ ಡಾ| ರಶ್ಮಿ ಅಮ್ಮೆಂಬಳ ಉಪನ್ಯಾಸ ನೀಡಲಿದ್ದಾರೆ. ಸಭಾಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಕೃಷ್ಣಪ್ಪ ಬಿ. ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ವಿಸ್ತೃತ ಕಟ್ಟಡ ಸಮಿತಿ ಅಧ್ಯಕ್ಷ ಸುರೇಶ್ ಕುಮಾರ್ ನಾವೂರು, ಉದ್ಯಮಿ ಜಿತೇಂದ್ರ ಸಾಲ್ಯಾನ್, ಪುತ್ತೂರು ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ನಿರ್ದೇಶಕ ಸೇಸಪ್ಪ ಕುಲಾಲ್ ಆಗಮಿಸಲಿದ್ದಾರೆ. ದ.ಕ. ಜಿಲ್ಲಾ ಧಾರ್ಮಿಕ ದತ್ತಿ ಪರಿಷತ್‌ನ ಸದಸ್ಯ ದೇವಪ್ಪ ಕುಲಾಲ್ ಪಂಜಿಕಲ್ಲು ಇವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ ಹೊಸ ಅಕ್ಕಿಯ ಪುದ್ದರ್ ವನಸ್ ಲೇಸ್ದ ಗೌಜಿ ಕಾರ್ಯಕ್ರಮ ನಡೆಯಲಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ರಮೇಶ್ ಸಾಲ್ಯಾನ್ ಸಂಚಯಗಿರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.