Breaking
21 Jun 2026, Sun

ಬೆಳ್ತಂಗಡಿ: ಜೀಪ್ ಗೆ ಡಿಕ್ಕಿಯಾದ ಖಾಸಗಿ ಬಸ್; ಚಾಲಕನಿಗೆ ಗಾಯ

ಬೆಳ್ತಂಗಡಿ: ಖಾಸಗಿ ಬಸ್ಸೊಂದು ಜೀಪ್ ಗೆ ಡಿಕ್ಕಿ ಹೊಡೆದು ಜೀಪ್ ನ ಒಂದು ಬದಿ ಸಂಪೂರ್ಣ ಜಖಂಗೊಂಡ ಘಟನೆ ವೇಣೂರಿನಲ್ಲಿ ನಡೆದಿದೆ.

ಬೆಳ್ತಂಗಡಿ ಕಡೆಯಿಂದ ಮೂಡಬಿದಿರೆಗೆ ಬರುತ್ತಿದ್ದ ಖಾಸಗಿ ಬಸ್ ಮೂಡಬಿದಿರೆಗೆ ಹೋಗುತ್ತಿದ್ದ ಜಗನ್ನಾಥ ಶೆಟ್ಟಿ ಎಂಬವರ ಜೀಪ್‌ ಗೆ ಡಿಕ್ಕಿಯಾಗಿದೆ, ಪರಿಣಾಮ ಚಾಲಕ ಜಗನ್ನಾಥ ಅವರಿಗೆ ಗಾಯಗಳಾಗಿದ್ದು, ಅವರನ್ನು ಮೂಡಬಿದಿರೆಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.

ಬಸ್ ನ ಸ್ಟೇರಿಂಗ್ ನಲ್ಲಿ ತಾಂತ್ರಿಕ ದೋಷ ಉಂಟಾಗಿ ಬಸ್‌, ಚಾಲಕನ ನಿಯಂತ್ರಣಕ್ಕೆ ಸಿಗದೆ ಎದುರು ಕಡೆಯಿಂದ ಬರುತ್ತಿದ್ದ ಜೀಪ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಈ ಬಗ್ಗೆ ಸ್ಥಳೀಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *