Breaking
22 Mar 2026, Sun

ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಿವೃತ್ತಿ ಹೊಂದಿದ ಸಂಘದ ಸಿಬ್ಬಂದಿ ಯಶೋದರ ಶೆಟ್ಟಿಗಾರ್ ಅವರಿಗೆ ಸನ್ಮಾನ

ಬಂಟ್ವಾಳ: ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಾಲ್ಕು ದಶಕಗಳಿಗೂ ಹೆಚ್ಚು ವಿವಿಧ ಸ್ತರಗಳಲ್ಲಿ ಸೇವೆ ಸಲ್ಲಿಸಿಕೊಂಡು ಎಲ್ಲರಿಂದಲೂ ಮೆಚ್ಚುಗೆಗೆ ಪಾತ್ರರಾಗಿ ನಿವೃತ್ತಿಗೊಂಡ ಸಂಘದ ಸಿಬ್ಬಂದಿ ಯಶೋದರ ಶೆಟ್ಟಿಗಾರ್ ರವರಿಗೆ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸಂಘದ ವತಿಯಿಂದ ಅಧ್ಯಕ್ಷರಾದ ಪ್ರಭಾಕರ ಪ್ರಭು ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಸಂದೇಶ ಶೆಟ್ಟಿ, ನಿರ್ದೇಶಕರಾದ ಸತೀಶ್ ಪೂಜಾರಿ, ರಶ್ಮಿತ್ ಶೆಟ್ಟಿ,ದಿನೇಶ್ ಪೂಜಾರಿ, ಚಂದ್ರಶೇಖರ ಶೆಟ್ಟಿ , ವೀರಪ್ಪ ಪರವ, ಜಾರಪ್ಪ ನಾಯ್ಕ, ಶಿವ ಗೌಡ, ವಿಶ್ವನಾಥ ಶೆಟ್ಟಿಗಾರ್, ಮಂದರಾತಿ ಎಸ್ ಶೆಟ್ಟಿ, ಪುಷ್ಪಲತಾ ಎಸ್ ಆರ್, ವೃತ್ತಿ ಪರ ನಿರ್ದೇಶಕರಾದ ರಾಜೇಶ್ ಶೆಟ್ಟಿ , ನವೀನ್ ಹೆಗ್ಡೆ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆರತಿ ಶೆಟ್ಟಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *