Breaking
29 Jun 2026, Mon

ಕಾರು ಮತ್ತು ಟಿಪ್ಪರ್‌ ಲಾರಿ ಅಪಘಾತ: ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಾಸರಗೋಡು: ಕಾರು ಮತ್ತು ಟಿಪ್ಪರ್ ಲಾರಿ ಅಪಘಾತದಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಮೃತಪಟ್ಟಿರುವ ಘಟನೆ ಸೆ. 26 ರಂದು ಮುಂಜಾನೆ ನಗರ ಹೊರವಲಯದ ಚೆಂಗಳ ನಾಲ್ಕನೇ ಮೈಲ್ ನಲ್ಲಿ ನಡೆದಿದೆ.

ಮೃತಪಟ್ಟವರನ್ನು ಬೇಕಲ ಡಿವೈಎಸ್‌ಪಿ ನೇತೃತ್ವದ ವಿಶೇಷ ತಂಡದ ಪೊಲೀಸ್ ಕಾನ್ಸ್ ಟೇಬಲ್ ಕೆ.ಕೆ ಸಜೀಶ್ (40) ಎಂದು ಗುರುತಿಸಲಾಗಿದೆ.

ಮಾದಕ ವಸ್ತು ಪ್ರಕರಣದ ಆರೋಪಿಯಾಗಿರುವ ಕಣ್ಣೂರು ನಿವಾಸಿ ದಂತ ವೈದ್ಯ ಡಾ. ಮುಹಮ್ಮದ್ ಸುನೀರನ್ನು ಪತ್ತೆ ಹಚ್ಚಲು ಕಾರಿನಲ್ಲಿ ತೆರಳುತ್ತಿದ್ದ ವೇಳೆ ಚೆಂಗಳ ನಾಲ್ಕನೇ ಮೈಲ್ ನಲ್ಲಿ ಅಂಡರ್ ಪಾಸೇಜ್ ಮೂಲಕ ಸರ್ವೀಸ್ ರಸ್ತೆಗೆ ಬರುತ್ತಿದ್ದ ಕಾರಿಗೆ ಚೆರ್ಕಳದಿಂದ ಕಾಸರಗೋಡಿಗೆ ಬರುತ್ತಿದ್ದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಸಜೀಶ್‌ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅವರು ಮೃತಪಟ್ಟಿದ್ದರು. ಕಾರಿನಲ್ಲಿದ್ದ ಮತ್ತೊಬ್ಬ ಸುಭಾಷ್ ಚಂದ್ರ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.

ಈ ಕುರಿತು ಟಿಪ್ಪರ್ ಲಾರಿ ಚಾಲಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *