Breaking
21 Sep 2026, Mon

ಬಡಗಕಜೆಕಾರು ಗ್ರಾಮ ಪಂಚಾಯತ್ ನಲ್ಲಿ ಗ್ರಾಮ ಸಭೆ

ಬಂಟ್ವಾಳ : ಬಡಗಕಜೆಕಾರು ಗ್ರಾಮ ಪಂಚಾಯತ್ ಗ್ರಾಮ ಸಭೆಯು ಸೆ. 26 ರಂದು ಪಂಚಾಯತ್ ಸಭಾಭವನದಲ್ಲಿ ಪಂಚಾಯತ್ ಅಧ್ಯಕ್ಷ ದೇವದಾಸ್ ಅಬುರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಭೆಯಲ್ಲಿ ಮಾತನಾಡಿದ ಅಧ್ಯಕ್ಷ ದೇವದಾಸ್ ಅಬುರ ಅವರು ಎರಡು ವರ್ಷ ಅವಧಿಯ ತಮ್ಮ ಆಡಳಿತ ಅವಧಿಯಲ್ಲಿ ಮಾಡಿದಂತಹ ಕೆಲಸ ಕಾರ್ಯಗಳ ಬಗ್ಗೆ ಹಾಗೂ ಮುಂದಿನ ಯೋಜನೆ ಬಗ್ಗೆ ಸಭೆಯಲ್ಲಿ ವಿವರಿಸಿ ಪಂಚಾಯಿತಿ ಸ್ವಾವಲಂಬನೆಗೆ ಸಾರ್ವಜನಿಕರು ಸಮಯಕ್ಕೆ ಸರಿಯಾಗಿ ತೆರಿಗೆ ಹಾಗೂ ನೀರಿನ ಬಿಲ್ಲನ್ನು ಪಾವತಿಸಿ ಹಾಗೂ ಪ್ರಸ್ತುತ 9/11 ಮನೆ ಕಟ್ಟಡ ಪರವಾನಿಗೆ ಡೋರ್ ನಂಬರ್ ವಿವಿಧ ಸೇವೆಗಳಿಗೆ ಪ್ರಾಧಿಕಾರದ ಅನುಮತಿಯ ಅಗತ್ಯತೆಯಿಂದಾಗಿ ಕೆಲಸಗಳು ಮಂದಗತಿಯಿಂದ ಸಾಗುತ್ತಿದೆ ಸಾರ್ವಜನಿಕರಿಗೆ ಆಗುತ್ತಿರುವ ಅನಾನುಕೂಲಗಳ ಬಗ್ಗೆ ಮುಂದಿನ ದಿನಗಳಲ್ಲಿ ಸರಕಾರಕ್ಕೆ ಮನವಿ ಮಾಡಲಾಗುವುದು ಎಂದರು.

ಸಾರ್ವಜನಿಕರಿಂದ ರಸ್ತೆಗಳಿಗೆ ಸಂಬಂಧಪಟ್ಟ ದೂರಗಳನ್ನು ಸ್ವೀಕರಿಸಲಾಯಿತು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ವಿದ್ಯಾಶ್ರೀ 2025 26 ನೇ ಸಾಲಿನ ಸಭೆಯ ನಡಾವಳಿಗಳನ್ನು ಮಂಡಿಸಿದರು.

ಈ ಸಂದರ್ಭದಲ್ಲಿ ಸಭೆಯ ನೋಡಲ್ ಅಧಿಕಾರಿಯಾಗಿ ತೋಟಗಾರಿಕಾ ಸಹಾಯಕ ನಿರ್ದೇಶಕರು ಪ್ರದೀಪ್ ಡಿಸೋಜ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಪಂಚಾಯತ್ ಉಪಾಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *