Breaking
6 May 2026, Wed

ಉಳ್ಳಾಲ: ಕಡಲ ತೀರದಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಉಳ್ಳಾಲ: ಕಡಲ ತೀರದ ಕಲ್ಲುಗಳ ಮಧ್ಯೆ ಕೊಳೆತ ಸ್ಥಿತಿಯಲ್ಲಿ ಮೃತದೇಹವೊಂದು ಪತ್ತೆಯಾಗಿದೆ.

ಮೀನಿಗೆಂದು ಗಾಳ ಹಾಕುತ್ತಿದ್ದ ಸಂದರ್ಭ ತಂಡವೊಂದಕ್ಕೆ ಈ ಮೃತದೇಹ ಗೋಚರಿಸಿದ್ದು, ತಕ್ಷಣ ಅವರು ಉಳ್ಳಾಲ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಮೊಗವೀರಪಟ್ನ ಶಿವಾಜಿ ಜೀವ ರಕ್ಷಕ ಈಜುಗಾರ ಸದಸ್ಯರ ಜೊತೆ ಬಂದ ಉಳ್ಳಾಲ ಪೊಲೀಸರು ಅವರ ಸಹಾಯದಿಂದ ಕೊಳೆತ ಸ್ಥಿತಿಯಲ್ಲಿದ್ದ ಮೃತದೇಹವನ್ನು ಮೇಲಕ್ಕೆತ್ತಿ ಸುಮಾರು 3-4 ಕಿ.ಮೀ ದೂರ ಹೆಗಲ ಮೇಲೆ ಎತ್ತಿಕೊಂಡು ಸಾಗಿ ಆಂಬುಲೆನ್ಸ್ ವಾಹನಕ್ಕೆ ತಲುಪಿಸಿದ್ದಾರೆ.

ಸುಮಾರು 40-45 ವರ್ಷ ವಯಸ್ಸಿನ ವ್ಯಕ್ತಿಯ ಮೃತದೇಹ ಇದಾಗಿದ್ದು, ಇತ್ತೀಚೆಗೆ ಮಂಗಳೂರು ಬಂದರಿನಿಂದ ಮೀನುಗಾರಿಕೆಗೆಂದು ತೆರಳಿದ್ದ ತಮಿಳು ಮೂಲದ ವ್ಯಕ್ತಿ ದೋಣಿಯಿಂದ ಬಿದ್ದು ನಾಪತ್ತೆ ಆಗಿರುವ ಕುರಿತು ಬಂದರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಹೀಗಾಗಿ ಅದೇ ವ್ಯಕ್ತಿಯ ಮೃತದೇಹ ಇದಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

ಉಳ್ಳಾಲ ಮೊಗವೀರಪಟ್ನ ಶಿವಾಜಿ ಜೀವ ರಕ್ಷಕ ಈಜುಗಾರರ ಸಂಘದ ಸದಸ್ಯರು ಪೊಲೀಸರಿಗೆ ಸಹಕರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

Leave a Reply

Your email address will not be published. Required fields are marked *