Breaking
22 Mar 2026, Sun

ಉಪ್ಪಿನಂಗಡಿ ಮೂಲದ ವಿದ್ಯಾರ್ಥಿನಿ ದುಬೈ ಯು.ಎ.ಇ ಅಂತಾರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆ

ದುಬೈ : ಶ್ರೀಲಂಕಾದ ಕೊಲಂಬೋದಲ್ಲಿ ಸೆ. 27 ರಿಂದ ಅಕ್ಟೋಬರ್ 4 ರ ವರೆಗೆ ನಡೆಯಲಿರುವ ಅಂಡರ್ 22 ವಯೋ ವಿಭಾಗದ ಹುಡುಗಿಯರ ಇಂಡೋರ್ ವಿಶ್ವಕಪ್ ಕ್ರಿಕೆಟ್ ಕೂಟಕ್ಕೆ ಯುನೈಟೆಡ್ ಅರಬ್ ಎಮಿರೇಟ್ಸ್ ದೇಶದ ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್ ತಂಡದಲ್ಲಿ ಉಪ್ಪಿನಂಗಡಿ ಮೂಲದ ವಿದ್ಯಾರ್ಥಿನಿ ಆಡಲಿದ್ದಾರೆ.

ಉಪ್ಪಿನಂಗಡಿಯ ಸಮೀಪದ ವಳಾಲ್, ಬಜತೂರು ಗ್ರಾಮದ ಅಮಿಷ ಆನಂದ್(14) ಈ ತಂಡಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿನಿ.

ಇವರು ಯು.ಎ.ಇ ಯ ಅಂತಾರಾಷ್ಟ್ರೀಯ ಇಂಡೋರ್ ಕ್ರಿಕೆಟ್ ತಂಡದ ಕಿರಿಯ ಆಟಗಾರ್ತಿಯಾಗಿದ್ದು, ದುಬೈ ಜೆ ಸ್ ಸ್ ಪ್ರೈವೇಟ್ ಸ್ಕೂಲ್‌ ನಲ್ಲಿ 9 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ದುಬೈಯಲ್ಲಿ ನೆಲೆಸಿರುವ ಕ್ರೀಡಾ ಪ್ರೇಮಿ ಹಾಗು ಪ್ರೋತ್ಸಾಹಿ ಆನಂದ್ ಪಟ್ಟೆ ಮತ್ತು ವಿನುತಾ ಆನಂದ್ ದಂಪತಿಯ ಮಗಳಾಗಿದ್ದಾರೆ.

ಈ ಕ್ರಿಕೆಟ್ ಪಂದ್ಯಾಟದಲ್ಲಿ ಯು.ಎ.ಇ ಸೇರಿದಂತೆ ಆಸ್ಟ್ರೇಲಿಯಾ ,ನ್ಯೂಜಿಲ್ಯಾಂಡ್,ಸೌತ್ ಆಫ್ರಿಕಾ, ಶ್ರೀಲಂಕಾ ಹಾಗೂ ಭಾರತದ ಮಹಿಳಾ ತಂಡಗಳು ಭಾಗವಹಿಸಲಿದೆ.

ಅಮಿಷ ಆನಂದ್ ಸಾಧನೆ :
ಸೀಸನ್(ಹಾರ್ಡ್)ಬಾಲ್ ನಲ್ಲಿ ಯು.ಎ.ಇ ಕ್ರಿಕೆಟ್ ಬೋರ್ಡ್ ನ ಅಂಡರ್ 15,16 ಮತ್ತು ಅಂಡರ್ 19ರ ಹುಡಿಗಿಯರ ವಿಭಾಗದ ಹಾರ್ಡ್ ಬಾಲ್ ಕ್ರಿಕೆಟ್ ಪಂದ್ಯ ಕೂಟದಲ್ಲಿ ಅತಿಥಿ ತಂಡಗಳಾದ ಇಂಗ್ಲೆಂಡ್ ನ್ಯೂಜಿಲ್ಯಾಂಡ್ , ಅಮೇರಿಕಾ ಹಾಗು ಓಮನ್ ತಂಡಗಳೆದುರು ಯು.ಎ.ಇ ಪರವಾಗಿ ಆಡಿದ ಅನುಭವ ಇರುವ ಇವರು, ಇಂಗ್ಲೆಂಡ್ನ ಕ್ರಿಕೆಟ್ ಆಟಗಾರ ಜೋ ರೂಟ್ ಕ್ರಿಕೆಟ್ ಅಕಾಡೆಮಿ ವತಿಯಿಂದ ನಡೆಯಲ್ಪಡುವ ರೂಟ್ ಕಪ್ ಅಂಡರ್ 16 ಹುಡುಗಿಯರ ವಿಭಾದಲ್ಲಿ ಸತತ ಎರಡನೇ ಬಾರಿ ದುಬೈ ತಂಡವನ್ನು ಪ್ರತಿನಿಧಿಸಿ , ಅತಿಥಿ ತಂಡಗಳಾದ ಇಂಗ್ಲೆಂಡ್ ನ್ಯೂಜಿಲ್ಯಾಂಡ್ ಇಂಗ್ಲೆಂಡ್ ಹಾಗು ನ್ಯೂಜಿಲ್ಯಾಂಡ್ ತಂಡಗಳನ್ನು ಸೋಲಿಸಿ ಯು.ಎ.ಇ ತಂಡವು ರೂಟ್ ಕಪ್ ನ್ನು ಗೆದ್ದುಕೊಳ್ಳುವಲ್ಲಿ ಪಾತ್ರ ನಿರ್ವಹಿಸಿದರು.

ಬಹುಮುಖ ಪ್ರತಿಭೆಯಾಗಿರುವ ಇವರು ಕ್ರಿಕೆಟ್‌ ನೊಂದಿಗೆ ವಾಲಿಬಾಲ್, ಅಥ್ಲೆಟಿಕ್, ಈಜುಗಾರಿಕೆ, ಹಾಡುಗಾರಿಕೆ ಹಾಗು ನೃತ್ಯದಲ್ಲೂ ಮುಂಚೂಣಿಯಲ್ಲಿದ್ದಾರೆ.

Leave a Reply

Your email address will not be published. Required fields are marked *