Breaking
6 Aug 2026, Thu

ಮಲ್ಪೆಯಲ್ಲಿ ರೌಡಿ ಶೀಟರ್ ಸೈಫುದ್ದೀನ್ ನ ಗುಂಡಿಕ್ಕಿ ಹತ್ಯೆ

ಉಡುಪಿ: ರೌಡಿ ಶೀಟರ್ ಸೈಫುದ್ದೀನ್ ನನ್ನು ಮಲ್ಪೆಯಲ್ಲಿ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಇಂದು (ಸೆ. 27) ನಡೆದಿದೆ.

ಎ.ಕೆ.ಎಂ.ಎಸ್ ಬಸ್ ಮಾಲೀಕನಾಗಿದ್ದ ಸೈಫುದ್ದೀನ್ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.

ಕೃತ್ಯ ನಡೆದ ಸ್ಥಳಕ್ಕೆ ಎಸ್ಪಿ ಹರಿರಾಮ್ ಶಂಕರ್ ಆಗಮಿಸಿ ಪರಿಶೀಲನೆ ನಡೆಸಿದ್ದು, ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೂವರಿಂದ ಈ ಕೃತ್ಯ ನಡೆದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಆರೋಪಿಗಳು ಚಾಲಕರರಾಗಿರುವ ಶಂಕೆಯಿದೆ. ಯಾವ ಕಾರಣಕ್ಕೆ ಕೊಲೆ ನಡೆದಿದೆ ಎಂಬುವುದು ಇನ್ನಷ್ಟೇ ತಿಳಿದು ಬರಬೇಕಿದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *