Breaking
6 Aug 2026, Thu

ಮಂಗಳೂರು : ರಾಷ್ಟ್ರ ಮಟ್ಟದ ಚೆಸ್ ಸ್ಪರ್ಧೆಗೆ ಶರಧಿ ರೈ ಆಯ್ಕೆ

ಮಂಗಳೂರು : ಶ್ರೀ ಸಾಯಿ ರಾಮ್ ಕಾಲೇಜ್ ಆಫ್ ಎಂಜಿನಿಯರಿಂಗ್ ಆನೇಕಲ್ ಬೆಂಗಳೂರು ಇಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಹಿಳೆಯರ ಚೆಸ್ ಪಂದ್ಯಾಟದ ಆಯ್ಕೆ ಪ್ರಕ್ರಿಯೆಯಲ್ಲಿ ಶರಧಿ ರೈ ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ಇವರು ಪ್ರಸ್ತುತ ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು ಶ್ರೀವಾಣಿ ವಿಜಯ ಹೈ ಸ್ಕೂಲ್ ಕೊಡ್ಲಮೊಗರಿನ ಹಳೆವಿದ್ಯಾರ್ಥಿನಿಯಾಗಿದ್ದಾರೆ.

ಆಶಾ ಹಾಗೂ ದಿಲೀಪ್ ರೈ ಸುಳ್ಯ ದಂಪತಿಯ ಪುತ್ರಿಯಾಗಿದ್ದಾರೆ.

Leave a Reply

Your email address will not be published. Required fields are marked *