Breaking
22 Mar 2026, Sun

ಶಿರಾಡಿ: ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳು ಡಿಕ್ಕಿ: 16 ಮಂದಿಗೆ ಗಾಯ

ಪುತ್ತೂರು: ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ 16 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಶಿರಾಡಿಯ ಗುಂಡ್ಯ ಬಳಿ ಸಂಭವಿಸಿದೆ.

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಮತ್ತು ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ರಾಜಹಂಸ ಬಸ್‌ಗಳ ನಡುವೆ ಅಪಘಾತ ನಡೆದಿದೆ.

ಧರ್ಮಸ್ಥಳಕ್ಕೆ ಹೋಗುತ್ತಿದ್ದ ಬಸ್‌ನಲ್ಲಿದ್ದ ಒಂಬತ್ತು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜಹಂಸ ಬಸ್‌ನಲ್ಲಿದ್ದ ಏಳು ಮಂದಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ನೆಲ್ಯಾಡಿ ಹೊರಠಾಣೆಯ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ, ವಾಹನ ಸಂಚಾರವನ್ನು ಸುಗಮಗೊಳಿಸಿದರು.

Leave a Reply

Your email address will not be published. Required fields are marked *