Breaking
21 Sep 2026, Mon

ಮಂಗಳೂರು: ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಯುವಕ ಪೊಲೀಸ್‌ ವಶಕ್ಕೆ

ಮಂಗಳೂರು: ಕದ್ರಿ ಪಾರ್ಕ್ ಬಳಿಯ ಗೋರಕ್ಷಕ್ ನಾಥ್ ಹಾಲ್ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಯುವಕನೋರ್ವನನ್ನು ಕದ್ರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಶಕ್ತಿನಗರ ಕುಂಟಲ್ಪಾಡಿ ನಿವಾಸಿ ದೀಕ್ಷಿತ್ ಅಲಿಯಾಸ್ ಕುಂಟ ದೀಚು (22) ಎಂದು ಗುರುತಿಸಲಾಗಿದೆ.

ಖಚಿತ ಮಾಹಿತಿ ಮೇರೆಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯ ನಿರೀಕ್ಷಕ ಅನಂತ ಪದ್ಮನಾಭ, ಪಿಎಸ್‌ಐ ಜ್ಯೋತಿ ಮತ್ತು ಅಪರಾಧ ಪತ್ತೆ ವಿಭಾಗದ ಸಿಬ್ಬಂದಿ ಸ್ಥಳಕ್ಕೆ ತೆರಳಿ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯಿಂದ ಪೊಲೀಸರು 1 ಕೆ.ಜಿ. 150 ಗ್ರಾಂ ತೂಕದ ಸುಮಾರು 30 ಸಾವಿರ ರೂ. ಮೌಲ್ಯದ ಗಾಂಜಾ ಹಾಗೂ ಸ್ಕೂಟರ್ ನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *